Kannada NewsKarnataka NewsNational

*ಕಂದಕಕ್ಕೆ ಉರುಳಿದ ವಾಹನ; ಆರು ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: 500 ಮೀಟರ್ ಆಳದ ಕಂದಕಕ್ಕೆ ವಾಹನವೊಂದು ಉರುಳಿ ಅವಘಡ ಸಂಭವಿಸಿದ್ದು, ಸುಮಾರು ಆರು ಜನ ಪ್ರಯಾಣಿಕರು ಸಾವಿಗಿಡಾಗಿದ್ದಾರೆ.

ಹಿಮಾಚಲ ಪ್ರದೇಶದ ಚಂಬಾ  ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಚಂಬಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಯಾದವ್, ಕಾರಿನಲ್ಲಿ ಸುಮಾರು ಆರು ಜನರಿದ್ದರು ಎಂದು ನಮಗೆ ಮಾಹಿತಿ ಬಂದಿದೆ. ಅವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿದ್ದರು. ಸ್ಥಳೀಯರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಯ ಸಹಾಯದಿಂದ ನಾವು ಎಲ್ಲಾ ಶವಗಳನ್ನು ಹೊರತೆಗೆದಿದ್ದೇವೆ. ಪ್ರಸ್ತುತ ಎಲ್ಲಾ ಶವಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಘಟನೆ ಬಗ್ಗೆ ಹಿಮಾಚಲ ಪ್ರದೇಶದ ಸಿಎಂ ಸುಖವಿಂದ‌ರ್ ಸಿಂಗ್ ಸುಖು ಕೂಡ ಚಂಬಾ ಜಿಲ್ಲೆಯ ಟಿಸ್ಸಾ ಉಪ ವಿಭಾಗದ ಚಾನ್ವಾಸ್‌ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button