Kannada NewsKarnataka NewsLatestPolitics

*ವೇಣೂರಿನಲ್ಲಿ ಪಟಾಕಿ ಗೋದಾಮು ಸ್ಫೋಟ: ಎಸ್ಕೇಪ್ ಆಗುತ್ತಿದ್ದ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ವೇಣೂರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೈಯದ್ದ್ ಬಶೀರ್ ಬಂಧಿತ ಆರೋಪಿ. ವೇಣೂರಿನಿಂದ ಪರಾರಿಯಾಗುತ್ತಿದ್ದ ಆರೋಪಿಯನ್ನು ಸುಳ್ಯ ಬಳಿ ಪೊಲೀಸರು ಬಂಧಿಸಿದ್ದಾರೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಕಾರ್ಮಿಕರ ದೇಹ ಸಂಪೂರ್ಣ ಛಿದ್ರ ಛಿದ್ರವಾಗಿ ಬಿದ್ದಿದ್ದು, ಗ್ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಪತ್ತೆಯಾಗಿರುವ ವಸ್ತುಗಳು ಹಲವು ಅನುಮಾನಕ್ಕೆ ಕಾರಣವಾಗಿವೆ. ಈ ಸ್ಥಳದಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕಗಳನ್ನು ತಯಾರಿಸಲಾಗುತ್ತಿತ್ತು ಎಂಬ ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Related Articles

Back to top button