
ಪ್ರಗತಿವಾಹಿನಿ ಸುದ್ದಿ: ಕೆಜಿಎಫ್ ಚಿತ್ರದ ಮೂಲಕ ಸಾಕಷ್ಟು ಪ್ರಸಿದ್ದಿಗಳಿಸಿದ ಹಿರಿಯ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ನಿಧನ ಹೊಂದಿದ್ದಾರೆ.
ಕೆಜೆಎಫ್ ಚಿತ್ರದಲ್ಲಿ ನಟಿಸಿದ ಅವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಕಳೆದ ಕೆಲವು ದಿನಗಳಿಂದ ಆನಾರೋಗ್ಯಕ್ಕೆ ತುತ್ತಾಗಿದ್ದ ದಿನೇಶ್, ಉಡುಪಿಯ ಕುಂದಾಪುರದ ಅವರ ಸ್ವಗೃಹದಲ್ಲೇ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ.
ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ದಿನೇಶ್ ಮಂಗಳೂರು ಅವರು, ಈ ಹಿಂದೆ ರಿಕ್ಕಿ, ಕಿರಿಕ್ ಪಾರ್ಟಿ, ಉಳಿದವರು ಕಂಡಂತೆ, ಕೆಜಿಎಫ್ ಸೇರಿದಂತೆ ಬ್ಲಾಕ್ ಬಸ್ಟರ್ ಚಿತ್ರಗಳಲ್ಲಿ ನಟಿಸಿದ್ದರು.
1970ರಲ್ಲಿ ಬಿಡುಗಡೆಯಾದ ಆಸ್ಫೋಟ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ದಿನೇಶ್ ಮಂಗಳೂರು, ಹಲವು ಕನ್ನಡ ಚಿತ್ರಗಳಲ್ಲಿ ಪೋಷಕ ನಟರಾಗಿ ಗಮನ ಸೆಳೆದಿದ್ದರು.