Kannada NewsKarnataka News
ಜನರ ಅನುಕೂಲಕ್ಕಾಗಿ ಸಮುದಾಯ ಭವನ ನಿರ್ಮಾಣ – ಸಂಸದ ಅಣ್ಣಾಸಾಹೇಬ ಜೊಲ್ಲೆ
ಸಮುದಾಯ ಭವನ, ಗಣೇಶ ಮಂದಿರದ ಸಾಂಸ್ಕೃತಿಕ ಭವನ ನಿರ್ಮಾಣ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ನಿಪ್ಪಾಣಿ ಮತಕ್ಷೇತ್ರದ ಸೌಂದಲಗಾ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ 10 ಲಕ್ಷ ರೂ. ಮೊತ್ತದಲ್ಲಿ, ಶ್ರೀ ವಿಠ್ಠಲ ಬಿರದೇವ ಮಂದಿರ ಹತ್ತಿರ ಸಮುದಾಯ ಭವನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ಮಂಜೂರಾದ 25 ಲಕ್ಷ ರೂ ಮೊತ್ತದಲ್ಲಿ ಗಣೇಶ ಮಂದಿರದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೂಮಿಪೂಜೆ ನೆರವೇರಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಸಭೆ, ಸಮಾರಂಭ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲು ಸಮುದಾಯ ಭವನ ನಿರ್ಮಿಸುವ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿದ್ದೇವೆ. ಉತ್ತಮ ಗುಣಮಟ್ಟದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಕ್ಷೇತ್ರದ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಅಧ್ಯಕ್ಷ ಪವನ ಪಾಟೀಲ, ಗಣಪತಿ ಗಾಡಿವಡ್ಡರ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಎಮ್. ಪಿ.ಪಾಟೀಲ, ಪ್ರಕಾಶ ಶಿಂಧೆ,ಸಂಜಯ ಶಿಂತ್ರೆ, ದಾದು ಕಾಂಬಳೆ, ಅಪ್ಪಾ ದಾವಣೆ, ವಿಕ್ರಮ ಪಾಟೀಲ, ಸಾಗರ ದೇಸಾಯಿ, ವಿನೋದ ಮಾನೆ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.




