Kannada NewsKarnataka NewsLatest

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. ಕನ್ನಡ ಶಬ್ಧಗಳನ್ನು ಕರಾರುವಕ್ಕಾಗಿ ಬರೆಯುವುದರಲ್ಲಿ ಅವರು ನಿಪುಣರಾಗಿದ್ದರು. ಹಲವಾರು ಕಿರಿಯ ಪತ್ರಕರ್ತರನ್ನು ತಿದ್ದಿ ಬೆಳೆಸಿದ ಕೀರ್ತಿ ಅವರದ್ದು.

Related Articles

Back to top button