GIT add 2024-1
Kore@40
Beereshwara 33

ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ನಿಧನ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ನೂರಾರು ಚಿತ್ರಗಳ ನಿರ್ಮಾಪಕರಾಗಿ, ನಿರ್ದೇಶಕರಾಗಿ, ನಟರಾಗಿ ಅವರು ಸೇವೆ ಸಲ್ಲಿಸಿದ್ದರು.

Emergency Service

ದ್ವಾರಕೀಶ್ ಆಗಸ್ಟ್ ೧೯, ೧೯೪೨ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ್ದರು, ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ,ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. ೧೯೬೩ರಲ್ಲಿ, ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ ಜೊತೆಗಿನ ದ್ವಾರಕೀಶ್ ಅವರ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.

Laxmi Tai add
Bottom Add3
Bottom Ad 2