Belagavi NewsBelgaum NewsKarnataka News

*ಕನ್ನಡದ ಹಿರಿಯ ಸಾಹಿತಿ ಪಂಚಾಕ್ಷರಿ ಹಿರೇಮಠ ನಿಧನ*

ಪ್ರಗತಿವಾಹಿನಿ ಸುದ್ದಿ : ಕನ್ನಡದ ಹಿರಿಯ ಸಾಹಿತಿ, ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿ ಹೋರಾಟಗಾರ ಡಾ. ಪಂಚಾಕ್ಷರಿ ಹಿರೇಮಠರವರು ನಿಧನರಾಗಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠರವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರೇಮಠರವರು ಶುಕ್ರವಾರ ನಿಧನ ಹೊಂದಿದ್ದು ಅವರಿಗೆ ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ.

ಹಿರೇಮಠರವರ ಅಂತ್ಯಕ್ರಿಯೆ ಮಾರ್ಚ್ 15 ರ ಇಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಹಿರೇಮಠರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊAಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

Home add -Advt

Related Articles

Back to top button