ಪ್ರಗತಿವಾಹಿನಿ ಸುದ್ದಿ, ಧಾರವಾಡ : ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (೯೬) ಮಂಗಳವಾರ ಬೆಳಗ್ಗೆ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು.
ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಚಿತ್ರನಟ ದಿ. ನಟರಾಜ ಏಣಗಿ ಸಹ ಅವರ ಪುತ್ರರಾಗಿದ್ದರು.
ಅವರ ಅಂತ್ಯ ಕ್ರಿಯೆ ಇಂದು ಮಧ್ಯಾನ 2 ಗಂಟೆಗೆ ಹೋಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
೧೯೪೦-೫೦ ರ ದಶಕದಲ್ಲಿ ಕನ್ನಡ ಮತ್ತು ಮರಾಠಿ ರಂಗಭೂಮಿ ಯಲ್ಲಿ ಪ್ರಸಿದ್ದ ನಟಿಯಾಗಿದ್ದ ಅವರು ಕರ್ನಾಟಕದ ಏಕೀಕರಣ ಚಳುವಳಿ ಆರಂಭವಾದಾಗ ತಮ್ಮ ನಾಟಕಗಳ ಮೂಲಕವೇ ಕನ್ನಡ ಕಟ್ಟುವ ಕೆಲಸ ಮಾಡಿದರು.
ಸಿಂಗಾರೆವ್ವ ಮತ್ತು ಅರಮನೆ ಸೇರಿದಂತೆ ಹತ್ತಾರು ಕನ್ನಡ ಸಿನಿಮಾ ಗಳಲ್ಲಿ ನಟಿಸಿರುವ ಅವರು ಇಡೀ ತಮ್ಮ ಜೀವನವನ್ನೇ ರಂಗಭೂಮಿಗಾಗಿ ಮುಡುಪಾಗಿಟ್ಟಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ನೂರಕ್ಕೂ ಹೆಚ್ಚು ರಂಗ ಸನ್ಮಾನಗಳು ಅವರ ಮುಡಿಗೇರಿದ್ದವು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ