
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಅಕಿದ್ದಾರೆ.
ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರ ತಮಿಳುನಾಡಿನ ಚೆನ್ನೈ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ತಮಿಳುನಾಡು ಡಿಜಿಪಿ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಅಲರ್ಟ್ ಆದ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.
ಉಪರಾಷ್ಟ್ರಪತಿಗಳ ನಿವಾಸದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿಬಾಂಬ್ ಕರೆ ಎಂಬುದನ್ನು ಪೊಲೀಸರು ತಿಳಿಸಿದ್ದಾರೆ.