NDA ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆ

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರನ್ನು ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ಅವರ ಹೆಸರನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದರು.

Home add -Advt

ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 19 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಭಾರತ ಸೇವಾದಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಶಂಕರ ಮುಗದ ಆಯ್ಕೆ

Related Articles

Back to top button