Latest

ಉಪರಾಷ್ಟ್ರಪತಿ ಚುನಾವಣೆ: ಯುಪಿಎ ಅಭ್ಯರ್ಥಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಮಾರ್ಗರೇಟ್ ಆಳ್ವ ಅವರನ್ನು ವಿಪಕ್ಷಗಳು ಅಭ್ಯರ್ಥಿಯಾಗಿ ಆಯ್ಕೆ ಮಾಡಿವೆ.

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಮಾತನಾಡಿದ ಶರದ್ ಪವಾರ್, ಮಾರ್ಗರೇಟ್ ಆಳ್ವ ಅವರ ಹೆಸರನ್ನು ಯುಪಿಎ ಅಭ್ಯರ್ಥಿಯಾಗಿ ಘೋಷಿಸಿದರು.

ಕರ್ನಾಟಕದ ಮಂಗಳೂರು ಮೂಲದ ಮಾರ್ಗರೇಟ್ ಆಳ್ವಾ ಗೋವಾ, ರಾಜಸ್ಥಾನ, ಗುಜರಾತ್ ಹಾಗೂ ಉತ್ತರಾಖಂಡ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಆಗಸ್ಟ್ 6ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 19 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ; ವಿದ್ಯಾರ್ಥಿಗಳಿಂದ ಕಾಲೇಜುಗಳಿಗೆ ಬೆಂಕಿ; ಹೊತ್ತಿ ಉರಿದ 7 ಬಸ್ ಗಳು

Home add -Advt

Related Articles

Back to top button