
ಪ್ರಗತಿವಾಹಿನಿ ಸುದ್ದಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಜಗದೀಪ್ ಧನ್ಕರ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಗದೀಪ್ ಧನ್ಕರ್ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ