Belagavi NewsBelgaum NewsKannada NewsKarnataka NewsPolitics
*ರೈತರಿಗೆ ಗೆಲುವು: ಸಿಹಿ ಹಂಚಿ ಸಂಭ್ರಮಿಸಿದ ಕರವೇ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ಸಿಗಲೆಂದು ಆಗ್ರಹಿಸಿ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದ್ದು, ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಭ್ರಮಿಸಿದೆ.
ಸರ್ಕಾರದ ನಿರ್ಣಯವನ್ನು ಸ್ವಾಗತಿಸಿ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರದ ನಿರ್ಣಯವನ್ನು ಸ್ವಾಗತಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ರಾಜ್ಯ ಸಂಚಾಲಕ ಸುರೇಶ್ ಗವನ್ನವರ, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.



