
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಚಿನ್ನ, ಬೆಳ್ಳಿ ದರದಲ್ಲಿ ದೈನಂದಿನ ದರ ಬದಲಾವಣೆ ಸರ್ವೇಸಾಮಾನ್ಯ. ಆದರೆ ಆಯುಧ ಪೂಜೆ, ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ.
ಕಳೆದ ಕೆಲ ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡು ಬರುತ್ತಿದ್ದು, ಆದರೆ ಇಂದು ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಸ್ಥಿರತೆ ಕಂಡುಬಂದಿದೆ. ಯಾವ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,150 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,500 ರೂ ನಿಗದಿಯಾಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,600 ರೂ ಆಗಿದೆ. ಬೆಳ್ಳಿದರದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದ್ದು, ಕೆಜಿ ಬೆಳ್ಳಿಗೆ 61,100 ರೂಪಾಯಿ ಇದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,44,400 ರೂ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 48,480 ರೂ ಆಗಿದ್ದು, 100 ಗ್ರಾಂ ಚಿನ್ನ 4,84,800 ರೂ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,800 ರೂ ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,150 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,500 ರೂ ನಿಗದಿಯಾಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,600 ರೂ ಆಗಿದೆ. ಬೆಳ್ಳಿ ದರ ಕೂಡ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 65,800 ರೂಪಾಯಿ ಇದೆ.
ಬೆಟ್ಟಿಂಗ್ ಭೂತ; ಸಾಲ ತೀರಿಸಲಾಗದೇ ಘಟಪ್ರಭಾ ನದಿಗೆ ಹಾರಿದ ವ್ಯಾಪಾರಿ