Election NewsKannada NewsKarnataka NewsPolitics
ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನ 8 ಅಭ್ಯರ್ಥಿಗಳು

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಿಂದ ಆಯ್ಕೆ ಆಗುವ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 8 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರ ನೇತೃತ್ವದಲ್ಲಿ 8 ಜನ ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ತಂಡ ತಮ್ಮ ನಾಮ ಪತ್ರ ಸಲ್ಲಿಕೆಯನ್ನು ವಿಧಾನಸೌಧದ ಎರಡನೇ ಮಹಡಿಯಲ್ಲಿ ಸಲ್ಲಿಸಲಾಯಿತು.
ಇನ್ನು ಈ ವೇಳೆ ಅಭ್ಯರ್ಥಿಗಳಾದ, ಬೋಸುರಾಜು, ವಸಂತ್ ಕುಮಾರ್, ಯತೀಂದ್ರ ಸಿದ್ದರಾಮಯ್ಯ, ಗೋವಿಂದ್ ರಾಜ್, ಐವನ್ ಡಿಸೋಜ, ಬಿಲ್ಕಿಸ್ ಬಾನು, ಜಗದೇವ್ ಗುಟ್ಟೇದಾರ್, ಬಸನಗೌಡ ಭಾಗಿಯಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ