
ಪ್ರಗತಿವಾಹಿನಿ ಸುದ್ದಿ: ಜೂನ್ 13ರಂದು ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಮಾಜಿ ಶಾಸಕ ಸಿ.ಟಿ.ರವಿ ಸೇರಿದಂತೆ ಮೂವರು ನಾಯಕರಿಗೆ ಬಿಜೆಪಿ ಪರಿಷತ್ ಟಿಕೆಟ್ ಘೋಷಣೆ ಮಾಡಿದೆ. ಸಿ.ಟಿ.ರವಿ, ಎನ್.ರವಿಕುಮಾರ್, ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ನೀಡಲಾಗಿದೆ.
ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದ್ದು, ಹಾಗಾಗಿ ಮೂರು ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಮಂಡ್ಯ ಲೋಕಸಭಾ ಕ್ಷೇತ್ರ ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಮತ್ತೆ ಸುಮಲತಾ ಅವರಿಗೆ ನಿರಾಸೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ