ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳು/ ಶಸ್ತ್ರಾಸ್ತ್ರಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. ಖಾಸಗಿ ಭದ್ರತಾ ಸಂಸ್ಥೆಗಳು ಹಾಗೂ ಖಾಸಗಿ ಗನಮ್ಯಾನ್ ಗಳು ಇದರಿಂದ ವಿನಾಯಿತಿ ಪಡೆಯಲು ಜಿಲ್ಲಾ ಮಟ್ಟದ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಸದಸ್ಯರಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಸದಸ್ಯ ಕಾರ್ಯ ನಿರ್ವಹಿಸಲಿದ್ದಾರೆ.
ಶಸ್ತ್ರಾಸ್ತ್ರ ಠೇವಣಿಯಿಂದ ವಿನಾಯಿತಿ ಬಯಸುವ ಖಾಸಗಿ ಭದ್ರತಾ ಸಂಸ್ಥೆಗಳು ಹಾಗೂ ಖಾಸಗಿ ಗನಮ್ಯಾನ್ ಗಳು ಮೇ.18ರೊಳಗಾಗಿ ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈಗಾಗಲೇ ಆಯುಧಗಳನ್ನು ಠೇವಣಿ ಮಾಡುವುದಕ್ಕೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದು, ಶಸ್ತ್ರಾಸ್ತ್ರ ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಫಲಿತಾಂಶ ಹೊರಬಿದ್ದ ಒಂದು ವಾರದ ನಂತರ ಆಯುಧಗಳನ್ನು ಸಂಬಂಧಿಸಿದವರಿಗೆ ವಾಪಸ್ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಪೊಲೀಸ್ ಆಯುಕ್ತರು, ಹೆಚ್ಚುವರಿ ಜಿಲ್ಲಾ ದಂಡಾಧಿಗಳು, ಮಹಾನಗರ ಪಾಲಿಕೆ, ಹಾಗೂ ಆರಕ್ಷಕ ಅಧೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ.
ಕುಸ್ತಿ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ