Kannada NewsLatest

ಬೆಳಗಾವಿಯಲ್ಲಿ ನಾಳೆಯಿಂದ ನಿಷೇಧಾಜ್ಞೆ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿ ಹಿನ್ನಲೆ ನಗರದಲ್ಲಿ ಅಂತ್ಯಕ್ರಿಯೆ ಮೆರವಣಿಗೆ, ಅನುಮತಿ ಪಡೆದ ಮೆರವಣಿಗೆಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಜಾತ್ರೆ, ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶ ನೀಡಿಲ್ಲ.

Related Articles

ಮಾರಕ, ಸ್ಫೋಟಕ ವಸ್ತುಗಳನ್ನು ಹೊತ್ತೊಯ್ಯುವುದು ಸಿಡಿಮದ್ದುಗಳನ್ನು ಸಿಡಿಸುವುದನ್ನೂ ನಿಷೇಧಿಸಲಾಗಿದೆ. ನಿಯಮ ಮೀರಿದವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಬಿ. ತಿಳಿಸಿದ್ದಾರೆ.

ಪರಿಷತ್ ಚುನಾವಣೆ: ಮತದಾನದ ಪ್ರಮಾಣವೆಷ್ಟು ಗೊತ್ತೇ?

Home add -Advt

Related Articles

Back to top button