Latest

ವಿಧಾನ ಪರಿಷತ್ ಚುನಾವಣೆ; 7 ಸದಸ್ಯರು ಅವಿರೋಧ ಆಯ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಇಲ್ಲದೇಯೇ ವಿಧಾನ ಪರಿಷತ್ ಗೆ 7 ಸದಸ್ಯರು ಆಯ್ಕೆಯಾಗಿದ್ದಾರೆ. ಹೆಚ್ಚುವರಿ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಪರಿಷತ್ ಗೆ 7 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ವಿಧಾನ ಪರಿಷತ್ ನ 7 ಸ್ಥಾನ ಖಾಲಿದ್ದ ಹಿನ್ನೆಲೆಯಲ್ಲಿ ಜೂನ್ 3ರಂದು ಚುನಾವಣೆ ಎದುರಾಗಿತ್ತು. ಬಿಜೆಪಿಯ ನಾಲ್ಕು, ಕಾಂಗ್ರೆಸ್ ನ ಎರಡು ಹಾಗೂ ಜೆಡಿಎಸ್ ನ ಓರ್ವ ಸೇರಿ ಒಟ್ಟು 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಗೆ ಕೊನೆ ದಿನ. ಆದರೆ 7ಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ 7 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಪರಿಷತ್ ನ ನೂತನ ಸದಸ್ಯರಿಗೆ ಕಾರ್ಯದರ್ಶಿ ವಿಶಾಲಾಕ್ಷಿ ಪ್ರಮಾಣ ಪತ್ರವನ್ನು ನೀಡಿದ್ದಾರೆ. ನೂತನ ಸದಸ್ಯರಾಗಿ ಬಿಜೆಪಿಯ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ನಾಯಕ್, ಕಾಂಗ್ರೆಸ್ ನ ಅಬ್ದುಲ್ ಜಬ್ಬಾರ್, ನಾಗರಾಜ್ ಯಾದವ್ ಹಾಗೂ ಜೆಡಿಎಸ್ ನ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button