Kannada NewsKarnataka NewsLatestPolitics

*ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:

ಕರ್ನಾಟಕ ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದಾರೆ.

ವಿಧಾನ ಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಬೆಂಗಳೂರು ನೈಋತ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಈಶಾನ್ಯ ಪದವೀಧರರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
ಬೆಂಗಳೂರು ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ.ಮಂಜುನಾಥ್
ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರ – ಟಿ.ಡಿ.ಶ್ರೀನಿವಾಸ್
ಬೆಂಗಳೂರು ಈಶಾನ್ಯ ಪದವೀಧರರ ಕ್ಷೇತ್ರ -ಡಾ.ಚಂದ್ರಶೇಖರ್ ಪಾಟೀಲ್


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button