ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬರದಿಂದ ಸಾಗಿದ್ದು, ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಕುಟುಂಬ ವಾಸ್ತು ಪ್ರಕಾರವಾಗಿ ಹಕ್ಕು ಚಲಾಯಿಸಿ ಗಮನ ಸೆಳೆದಿದ್ದಾರೆ.
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಕ್ಕು ಚಲಾಯಿಸುತ್ತಿದ್ದು, ಹೆಚ್.ಡಿ.ರೇವಣ್ಣ ಕುಟುಂಬದವರು ವಾಸ್ತು ಹಾಗೂ ಸಂಖ್ಯಾ ಶಾಸ್ತ್ರದ ಪ್ರಕಾರ ಮತದಾನ ಮಾಡಿದ್ದಾರೆ. ಪುರಸಭೆ ಸದಸ್ಯರಿಗೂ ವಾಸ್ತು ನೋಡಿ ಮತದಾನ ಮಾಡಿಸಿದಾರೆ. ಸಂಸದ ಪ್ರಜ್ವಲ್ ರೇವಣ್ಣ 9 ಅದೃಷ್ಟ ಸಂಖ್ಯೆ ಎಂಬ ಕಾರಣಕ್ಕೆ ನಂಬರ್ ನೋಡಿಕೊಂಡು ಮತದಾನ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಕಲಬುರ್ಗಿ-ಯಾದಗಿರಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿದ್ದಾರೆ. ನನ್ನ ಮತ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಪರ ಚಲಾಯಿಸಿದೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಧಾನ ಪರಿಷತ್ ನ 25 ಸ್ಥಾನಕ್ಕೆ ಮತದಾನ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ