ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜೂನ್ 29ಕ್ಕೆ ಚುನಾವಣೆ ನಡೆಯಲಿದೆ. ಜೂನ್ 29ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ನಸೀರ್ ಅಹ್ಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಹೆಚ್.ಎಂ. ರೇವಣ್ಣ, ಟಿ.ಎ. ಸರವಣ, ಡಿ.ಯು. ಮಲ್ಲಿಕಾರ್ಜುನ್, ಎನ್.ಎಸ್. ಬೋಸರಾಜು ಅವರ ಪರಿಷತ್ ಸದಸ್ಯತ್ವವ ಅವಧಿ ಮುಗಿಯಲಿದ್ದು, ಈ ಸ್ಥಾನಗಳ ಭರ್ತಿಗೆ ಚುನಾವಣೆ ನಡೆಯಲಿದೆ.
ಎಂ ಎಲ್ ಸಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಕಳೆದ ವಿಧಾನಸಭೆಯಲ್ಲಿ ರಾಣೆಬೆನ್ನೂರು ಸೀಟು ತ್ಯಾಗ ಮಾಡಿದ್ದ ಆರ್. ಶಂಕರ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸಿ.ಪಿ. ಯೋಗೇಶ್ವರ್ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಎಂಟಿಬಿ ನಾಗರಾಜ್ ಮತ್ತು ಹೆಚ್ ವಿಶ್ವನಾಥ್ , ಮಾಲಿಕಯ್ಯ ಗುತ್ತೇದಾರ್, ಭಾರತಿ ಶೆಟ್ಟಿ, ನಿರ್ಮಲ್ ಕುಮಾರ್ ಸುರಾನಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಕಾಂಗ್ರೆಸ್ ನಲ್ಲಿ ಹೆಚ್.ಎಂ. ರೇವಣ್ಣ, ನಸೀಸ್ ಅಹ್ಮದ್, ಎಂ.ಡಿ. ಲಕ್ಷ್ಮೀನಾರಾಯಣ, ಐವಾನ್ ಡಿಸೋಜ, ವಿ.ಎಸ್. ಉಗ್ರಪ್ಪ, ಜಯಮಾಲಾ, ಎಂ. ರಾಮಚಂದ್ರಪ್ಪ ಟಿಕೆಟ್ ನಿರೀಕ್ಷೆಯಲ್ಲಿದ್ದರೆ ಜೆಡಿಎಸ್ ನಲ್ಲಿ ಹಾಲಿ ಎಂಎಲ್ಸಿ ಟಿಎ ಸರವಣ ಮರು ಆಯ್ಕೆ ಬಯಸಿದ್ದಾರೆ. ಕೋನರೆಡ್ಡಿ ಮತ್ತು ಕುಪೇಂದ್ರ ರೆಡ್ಡಿ ಇಬ್ಬರಲ್ಲೂ ಟಿಕೆಟ್ ಗಾಗಿ ಪೈಪೋಟಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ