ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜುಲೈ 12ರಂದು ಪರಿಷತ್ ಉಪಚುನಾವಣೆ ನಡೆಯಲಿದೆ.
ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆ ಇದಾಗಿದೆ.
ಜಗದೀಶ್ ಶೆಟ್ಟರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಬೆಳಗಾವಿಯಿಂದ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ