Latest

ಸಿಡಿ ವಿಚಾರ ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಕುರಿತ ವಿಚಾರಗಳು ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್ ಗೆ ಲಿಖಿತ ಉತ್ತರ ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಸಿಡಿ ಕುರಿತಾದ ಆರೋಪ-ಪ್ರತ್ಯಾರೋಪ ಹೇಳಿಕೆಗಳು, ಗಮನಕ್ಕೆ ಬಾರದ ಕಾರಣ ತನಿಖೆ ಮಾಡುವ ಅಥವಾ ಆರೋಪಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಶ್ನೆಯೂ ಇಲ್ಲಿ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

Home add -Advt

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ದೂರು ನೀಡಿದ್ದ ಎರಡೇ ದಿನಕ್ಕೆ ಕೇಸ್ ವಾಪಸ್ ಪಡೆದ ಪ್ರಕರಣ, 6 ಸಚಿವರು ಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಡಿ ಹೇಳಿಕೆ ವಿಚಾರ ಇಷ್ಟೆಲ್ಲ ನಡೆದಿದ್ದರೂ ಸಿಎಂ ಯಡಿಯೂರಪ್ಪ ಇದಾವುದೂ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಹೇಳಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕೇಳಿದ ಚುಕ್ಕಿಗುರುತಿನ ಪ್ರಶ್ನೆಗೆ ಸಿಎಂ ಯಡಿಯೂರಪ್ಪ ಲಿಖಿತ ಉತ್ತರ ನೀಡಿದ್ದಾರೆ.

Related Articles

Back to top button