Election News

*ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ: ಮುಹೂರ್ತ ಫಿಕ್ಸ್*

ಬೆಂಗಳೂರು: ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪರಿಷತ್ ನ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ಜೂನ್ 13ರಂದು ಮತದಾನ ನಡೆಯಲಿದೆ. ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಜೂನ್ 3 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 6ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನವಾಗಿದೆ.

Related Articles

Back to top button