ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಕಲಾಪ ಫೆ.10ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಿನ್ನೆ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ ಸಭಾಪತಿ ಆಯ್ಕೆ ನಡೆಯಲಿದ್ದು ಮೂರು ದಿನಗಳ ಕಾಲ ಪರಿಷತ್ ಕಲಾಪ ವಿಸ್ತರಿಸಲಾಗಿದೆ.
ಮಂಗಳವಾರ ಸಭಾಪತಿ ಆಯ್ಕೆ ಚುನಾವಣೆ ನಡೆಯಲಿದ್ದು, ಸೋಮವಾರ ಸಭಾಪತಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ ಈ ನಿಟ್ಟಿನಲ್ಲಿ ಫೆ.10ರವರೆಗೆ ವಿಧಾನ ಪರಿಷತ್ ಕಲಾಪ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಭಾಪತಿ
ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ