Kannada NewsLatest

*ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಇದೆ ಎನ್ನುವ ದೂರು ಆಧರಿಸಿ ಕಬ್ಬಿನ ತೂಕದ ಬಗ್ಗೆ ದೂರು ನೀಡಿದ ತರುವಾಯ ಮೊದಲನೇಯದಾಗಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಅಂಕಿ-ಅಂಶಗಳನ್ನು ಪಡೆದುಕೊಂಡಿದ್ದು ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಕಾರ್ಖಾನೆಗಳ ಮೇಲೆ ಕ್ರಮ ಸರಕಾರ ಕ್ರಮ ಜರುಗಿಸಲಿದೆ ಎಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಇಂದು (ಡಿ.20) ಸದಸ್ಯರಾದ ಪ್ರಕಾಶ ಕೆ.ರಾಠೋಡ್ ಮತ್ತು ಪಿ.ಆರ್.ರಮೇಶ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಕ್ಕರೆ ಕಾರ್ಖಾನೆಗಳು ವಿವಿಧ ಮೂಲಗಳಿಂದ ಉತ್ಪಾದಿಸುವ ಎಥನಾಲ್‌ಗೆ ಕೇಂದ್ರ ಸರ್ಕಾರವು ಲಾಭದಾಯಕ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು 2022-23ನೇ ಕಬ್ಬು ನುರಿಸುವ ಹಂಗಾಮಿಗೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ಕಾರ್ಖಾನೆವಾರು ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಗೊಳಿಸಿ 2022ರ ಅಕ್ಟೋಬರ್‌ನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕಬ್ಬು ಸಾಗಣೆ ಮತ್ತು ತೂಕದ ವಿಷಯದಲ್ಲಿ ರೈತರಿಗೆ ಕಾರ್ಖಾನೆಗಳಿಂದ ಮೋಸವಾಗುತ್ತಿದೆ ಎಂದು ಸದಸ್ಯರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು. ಕಬ್ಬು ನುರಿಸುವ ಕಾರ್ಖಾನೆಗಳಿಂದ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ತೂಕದ ವಿಷಯದಲ್ಲಿ ಕಾರ್ಖಾನೆಗಳು ಪ್ರಾಮಾಣಿಕತೆ ತೋರಿಸುತ್ತಿಲ್ಲ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರು ಸದನದ ಸದಸ್ಯರ ಪ್ರಶ್ನೆಗಳಿಗೆ ಧನಿಗೂಡಿಸಿದರು. ಎಥನಾಲಗೆ ಕಳುಹಿಸುವ ಕಬ್ಬಿಗೆ ಪ್ರತ್ಯೇಕ ಬೆಲೆ ನೀಡಬೇಕು. ಎಸ್‌ಎಪಿ ನಮ್ಮ ರಾಜ್ಯದಲ್ಲಿ ಜಾರಿ ಮಾಡಬೇಕು ಎಂದು ಪಿ.ಆರ್.ರಮೇಶ ಅವರು ಇದೆ ವೇಳೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 2022-23ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಮುಗಿದ ನಂತರ ಸಕ್ಕರೆ ಎಥನಾಲ್ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ ಸೂತ್ರದ ಪ್ರಕಾರ ಪರಿಗಣಿಸಿ ರೈತರಿಗೆ ಪಾವತಿಸಬೇಕಾದ ಅಂತಿಮ ಕಬ್ಬಿನ ದರವನ್ನು ನಿರ್ಧರಿಸಲಾಗುವುದು. ಕಬ್ಬು ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕು ಎನ್ನುವ ನಿಟ್ಟಿನಲ್ಲಿ ಕಬ್ಬಿನ ಉಪ ಉತ್ಪನ್ನದ 202 ಕೋಟಿ ರೂ.ಗಳ ಲಾಭಾಂಶವನ್ನು ಕಬ್ಬು ಬೆಳೆಗಾರರಿಗೆ ಕೊಡುವ ಆದೇಶದ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.

*ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತಗಳ ರಚನೆಯೇ ಅಂತಿಮ*

 

https://pragati.taskdun.com/karnataka-maharashtra-border-issuevidhanasabhecm-basavaraj-bommaistates-redistricting-act-creation-of-language-wise-provinces-is-final/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button