ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಮೊದಲ ಪರೀಕ್ಷೆಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯಲು ವಿಪಕ್ಷ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಎಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಸದಾಶಿವನಗರದ ತಮ್ಮ ನಿವಾಸದಿಂದ ಎತ್ತಿನಗಾಡಿಯ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತಮ್ಮ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿದ್ದಾರೆ.
ಈ ಮೂಲಕ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ ಚಲೋ ನಡೆಸಿದ್ದು, ವಿನೂತನ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ