Latest

ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ – ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಿಂದ ಜನರು ಆರ್ಥಿಕ ಸಂಕಷ್ಟಕ್ಕಿಡಾಗಿರುವ ಸಂದರ್ಭದಲ್ಲೇ ದಿನದಿಂದ ದಿನಕ್ಕೆ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರ ಬದುಕನ್ನೇ ದುಸ್ಥರ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಲೆ ಏರಿಕೆ ಖಂಡಿಸಿ ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್ ನಿಂದ ಹಿಡಿದು ಪ್ರತಿಯೊಂದು ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಕೊರೊನಾದಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಬರೆ ಎಳೆದಿದೆ ಎಂದು ಗುಡುಗಿದರು.

ಪ್ರಧಾನಿ ಮೋದಿ ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಜನರಿಗೆ ವಂಚಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗುವವರೆಗೂ ನಮ್ಮ ಹೋರಾಟ ನಿಲ್ಲದು. ಇದು ಕೇವಲ ಸಾಂಕೇತಿಕ ಹೋರಾಟ ಅಷ್ಟೇ. ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಇನ್ನಷ್ಟು ಉಗ್ರ ಹೋರಾಟ ನಡೆಸುತ್ತೇವೆ. ಇಂದಿನಿಂದ ಸದನದ ಒಳಗೂ, ಹೊರಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಎತ್ತಿನ ಗಾಡಿಯಲ್ಲಿ ಅಧಿವೇಶಕ್ಕೆ ಬಂದ ಕಾಂಗ್ರೆಸ್ ನಾಯಕರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button