*ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ*

ಶೈಕ್ಷಣಿಕ ಪ್ರಗತಿಗೆ ಛಾಯಾ ದೇವಣ ಗಾಂವ್ಕರ್ ವರದಿಯ ಶಿಫಾರಸ್ಸುಗಳ ಜಾರಿಗೆ ಸರ್ಕಾರ ಬದ್ದ: ಸಿಎಂ ಘೋಷಣೆ
ಪ್ರಗತಿವಾಹಿನಿ ಸುದ್ದಿ: ವಿಧಾನಮಂಡಲ ಅದಿವೇಶನದ ಕೊನೇ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆಯಲ್ಲಿ ಸರ್ಕಾರದ ಉತ್ತರವನ್ನು ವಿವರಿಸಿದರು.
ಉತ್ತರ ಕರ್ನಾಟಕದ ಕುರಿತ ಚರ್ಚೆ ವೇಳೆ ಮುಖ್ಯಮಂತ್ರಿಗಳ ಉತ್ತರದ ಹೈಲೈಟ್ಸ್…
ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಹಾಲು ಉತ್ಪಾದನೆ ಕಡಿಮೆ ಇರುವುದು ತಲಾ ಆದಾಯದಲ್ಲಿ ಹಿಂದುಳಿಯಲು ಒಂದು ಕಾರಣ
ತಲಾ ಆದಾಯದಲ್ಲಿ ಕಲ್ಬುರ್ಗಿ ಅತ್ಯಂತ ಹಿಂದುಳಿದಿದೆ
ತಲಾ ಆದಾಯದ ಜಿಲ್ಲಾವಾರು ಪಟ್ಟಿಯನ್ನು ಸದನದ ಮುಂದಿಟ್ಟ ಮುಖ್ಯಮಂತ್ರಿಗಳು
ನಂಜುಂಡಪ್ಪ ಅವರ ವರದಿಯ ಆಶಯಗಳು ಮತ್ತು ಪರಿಣಾಮಗಳನ್ನು ಉಲ್ಲೇಖಿಸಿದ ಸಿಎಂ
ನಂಜುಂಡಪ್ಪ ಅವರ ವರದಿಯ ಬಳಿಕ ನೀಡಿದ ಅನುದಾನಗಳ ಬಳಕೆ, ಅನುಷ್ಠಾನ ಮತ್ತು ಫಲಿತಾಂಶದ ಬಗ್ಗೆ ಅಧ್ಯಯನ, ಸಮೀಕ್ಷೆ ನಡೆಸುವ ಸರ್ಕಾರದ ಕಾಳಜಿ ಮತ್ತು ಮಹತ್ವವನ್ನು ವಿಸ್ತೃತವಾಗಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಿಎಂ ಉತ್ತರದ ಹೈಲೈಟ್ಸ್ ಗಳು…
ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೆ ದಿನದಿಂದಲೆ ಪ್ರಾರಂಭವಾಗಿದೆ. ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ ಸಹ ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ. ಹಿಂದಿನ ವರ್ಷಗಳಲ್ಲಿ ಮೊದಲ ವಾರದಲ್ಲೆ ಚರ್ಚೆ ಮಾಡಿದ ಉದಾಹರಣೆಗಳಿಲ್ಲ. ನಾವು ಈ ಭಾಗದ ಅಭಿವೃದ್ಧಿಗೆ ಬದ್ಧರಾಗಿರುವುದರಿಂದ ಸದಸ್ಯರು ಚರ್ಚೆ ನಡೆಸುವುದಕ್ಕೆ ಹಾಗೂ ಉತ್ತರ ಕೊಡುವುದಕ್ಕೆ ಯಾವುದೇ ಸಮಸ್ಯೆಯಿಲ್ಲ. ನೀವೆಲ್ಲರೂ ಮಾತನಾಡಿದ್ದಕ್ಕಿಂತ ಹೆಚ್ಚಿನ ಸಮಯ ಉತ್ತರ ಕೊಡುವಷ್ಟು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಿಂದೆಯೂ ಮಾಡಿತ್ತು. ಈಗಲೂ ಮಾಡುತ್ತಿದೆ. ಅಷ್ಟು ದೀರ್ಘ ಉತ್ತರವನ್ನೇನೂ ನಾನು ಕೊಡುವುದಿಲ್ಲ. ಹಾಗಾಗಿ ಗಾಬರಿಯಾಗಬೇಡಿ ಮತ್ತು ಸಭಾತ್ಯಾಗ ಮಾಡಿ ಹೋಗಬೇಡಿ. ನೀವು ಮಾತನಾಡಿದಾಗ ನಾವು ತಾಳ್ಮೆಯಿಂದ ಕೇಳಿಸಿಕೊಂಡಿದ್ದೇವೆ.
ಉತ್ತರ ಕರ್ನಾಟಕ ವಿಷಯಗಳ ಕುರಿತು 39 ಜನ ಜನ ಸದಸ್ಯರು ಭಾಗವಹಿಸಿ 17 ಗಂಟೆಗಳಿಗೂ ಹೆಚ್ಚಿನ ಕಾಲ ಚರ್ಚೆ ಮಾಡಿದ್ದಾರೆ. ಮಾನ್ಯ ವಿರೋಧ ಪಕ್ಷದ ನಾಯಕರು 02 ಗಂಟೆ 55 ನಿಮಿಷ ಮಾತನಾಡಿದ್ದಾರೆ. ಆಡಳಿತ ಪಕ್ಷದ ಸದಸ್ಯರು ಸುಮಾರು 7.13 ಗಂಟೆ ಮಾತನಾಡಿದ್ದಾರೆ. ವಿರೋಧ ಪಕ್ಷದವರಲ್ಲಿ ಬಿಜೆಪಿಯವರು 6.49 ಗಂಟೆ, ಜೆಡಿಎಸ್ನವರು 1.56 ಗಂಟೆ ಮಾತನಾಡಿದ್ದಾರೆ. ಶ್ರೀಯುತ ಬಸವನ ಗೌಡ ಯತ್ನಾಳ್ ಅವರು 1.04 ಗಂಟೆ ಮಾತನಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ಸರ್ಕಾರ ದೀರ್ಘ ಕಾಲದ ಚರ್ಚೆಗೆ ಸಹಕರಿಸಿರುವುದು ಹೆಚ್ಚೆಚ್ಚು ಸಲಹೆಗಳು ಬರಲಿ ಎಂಬ ಕಾರಣದಿಂದ. ವಿರೋಧ ಪಕ್ಷದ ಸದಸ್ಯರು ಸಲಹೆಗಳನ್ನು ನೀಡುವುದಕ್ಕಿಂತ ಆಕ್ಷೇಪಣೆ ಹಾಗೂ ಬೇಡಿಕೆಯ ಭಾಷೆಯಲ್ಲೆ ಮಾತನಾಡಿದರು. ವಿರೋಧ ಪಕ್ಷವೆಂದರೆ ಎಲ್ಲವನ್ನೂ ವಿರೋಧಿಸುವುದಾಗಲಿ, ಆಡಳಿತ ಪಕ್ಷವೆಂದರೆ ಎಲ್ಲವನ್ನೂ ಸಮರ್ಥಿಸುವುದಷ್ಟೆ ಅಲ್ಲ.
ಅನುದಾನಗಳನ್ನು ಒದಗಿಸಿದರೂ ಅಭಿವೃದ್ಧಿಯಾಗದ ಕಾರಣಗಳೇನು? ಚಾರಿತ್ರಿಕ ಸಂಗತಿಗಳೇನಾದರೂ ಇವೆಯೆ? ಹೇಗೆ ಅಭಿವೃದ್ಧಿ ಸಾಧಿಸುವುದು? ಅನುದಾನಗಳಿಂದ ಮಾತ್ರವೇ ಅಭಿವೃದ್ಧಿ ಸಾಧ್ಯವಾಗುತ್ತದೆಯೆ? ಜನರ ಮನಸ್ಥಿತಿಯಲ್ಲಿ ಉಂಟು ಮಾಡಬೇಕಾದ ಬದಲಾವಣೆಗಳೇನು? ಇವೆಲ್ಲ ವಿಚಾರಗಳ ಕುರಿತು ಚರ್ಚಿಸಬೇಕಾಗಿದೆ.
ತಮಗೆಲ್ಲ ಗೊತ್ತಿರುವ ಹಾಗೆ ಹಿಂದಿನ ಯುಪಿಎ ಸರ್ಕಾರ ನಿರ್ಮಲ ಭಾರತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಉದ್ದೇಶಿಸಿತ್ತು. 2013-14 ರ ಬಜೆಟ್ ನಲ್ಲೆ 4260 ಕೋಟಿ ರೂಗಳನ್ನು ಒದಗಿಸಿತ್ತು. 2013 ರ ವೇಳೆಗೆ ಸುಮಾರು ಶೇ.38-40 ರಷ್ಟು ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿತ್ತು. ಮೋದಿಯವರು ನಿರ್ಮಲ್ ಭಾರತ್ ಯೋಜನೆಯನ್ನು ಸ್ವಚ್ಛ ಭಾರತ್ ಮಿಷನ್ ಎಂದು ಬದಲಾಯಿಸಿದರು. 2019-20 ರ ವೇಳೆಗೆ ಶೇ.90 ರಷ್ಟು ಮನೆಗಳಲ್ಲಿ ಶೌಚಾಲಯಗಳು ನಿರ್ಮಾಣವಾದವೆಂದು ವರದಿ ಹೇಳುತ್ತದೆ.
ಈ ವಿಚಾರದ ಕುರಿತು ವಿಶ್ವಬ್ಯಾಂಕು ಆಸಕ್ತಿಯ ಸಂಗತಿಯೊAದನ್ನು ಅಧ್ಯಯನಗಳ ಮೂಲಕ ಬಹಿರಂಗಗೊಳಿಸಿದೆ. 2021-21 ರಲ್ಲಿ ಶೇ. 90 ರಷ್ಟು ಶೌಚಾಲಯಗಳಿದ್ದರೂ ಸಹ ಶೌಚಾಲಯಗಳನ್ನು ಬಳಸುವವರ ಪ್ರಮಾಣ ಶೇ. 65 ರಷ್ಟು ಮಾತ್ರ. 2018-19 ರಲ್ಲಿ ಶೇ.74 ರಷ್ಟು ಜನ ಶೌಚಾಲಯ ಬಳಸುತ್ತಿದ್ದರೆ 21 ರ ವೇಳೆಗೆ ಶೇ.9 ರಷ್ಟು ಕಡಿಮೆಯಾಯಿತು. ಇದಕ್ಕೆ ಕಾರಣಗಳೇನು?
ನಮ್ಮ ಜೇವರ್ಗಿ ಕ್ಷೇತ್ರದ ಶಾಸಕರು ಮಹಿಳೆಯರ ಬಹಿರ್ದೆಸೆಗೆ ಅಡ್ಡ ಗೋಡೆಗಳನ್ನು ನಿರ್ಮಿಸಬೇಕಾಗಿದೆ ಎಂದು ಕೇಳುತ್ತಿದ್ದಾರೆ. ಶೌಚಾಲಯಗಳಿದ್ದಾವಲ್ಲ ಅಂದೆ ನಾನು. ಜನ ಬಳಸುವುದಿಲ್ಲ ಸಾರ್ ಎನ್ನುತ್ತಿದ್ದಾರೆ. ಇದಕ್ಕೆ ಏನು ಹೇಳುವುದು. ಸರ್ಕಾರ ಅನುದಾನ ನೀಡಿ ಶೌಚಾಲಯ ಕಟ್ಟಿಸಿದೆ. ಜಲಜೀವನ್ ಮಿಷನ್ ಯೋಜನೆಯಲ್ಲಿ ನಲ್ಲಿಗಳನ್ನು ಅಳವಡಿಸಿ ನೀರನ್ನೂ ಸರಬರಾಜು ಮಾಡಲಾಗುತ್ತಿದೆ. ಆದರೂ ಜನ ಬಳಸುವುದಿಲ್ಲ ಎನ್ನುತ್ತಾರೆ. ಹೇಗೆ ಈ ಸಮಸ್ಯೆಯನ್ನು ಸರಿ ಪಡಿಸುವುದು? ಇವೆಲ್ಲ ಸರಳವಾದ ಸಂಗತಿಗಳಲ್ಲ. ಇವಕ್ಕೆ ಪರಿಹಾರಗಳನ್ನು ನಾವುಗಳು ಹುಡುಕಬೇಕಾಗಿದೆ. ಬಾಲ್ಯ ವಿವಾಹ ಮಾಡಬಾರದು. ಮಾಡಿದರೆ ಕಠಿಣ ಶಿಕ್ಷೆಗಳಿವೆ ಎಂಬ ಕಾನೂನುಗಳಿವೆ. ಆದರೆ ಇಡೀ ಆಡಳಿತಾಂಗದ ಕಣ್ಣು ತಪ್ಪಿಸಿ ಮದುವೆ ಮಾಡಿ ಬಿಡುತ್ತಾರೆ. ಇದರಿಂದ ಬಾಲ ಗರ್ಭಿಣಿಯರಾಗುವ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಾಲ ಗರ್ಭಿಣಿಯರ ಹೊಟ್ಟೆಯಲ್ಲಿ ಹುಟ್ಟುವ ಕೂಸುಗಳು ಅಪೌಷ್ಟಿಕತೆಯ ಸಮಸ್ಯೆಯನ್ನು ಎದುರಿಸುತ್ತವೆ. ಜನರಿಗೆ ಎಲ್ಲ ತಿಳುವಳಿಕೆ ಇದ್ದೂ ಈ ರೀತಿಯ ಕ್ರೆöÊಮ್ ಮಾಡುತ್ತಾರೆ. ಆದ್ದರಿಂದಲೆ ನಾನು ಪ್ರತಿ ಬಾರಿ ಡಿಸಿ ಸಿಇಓ ಸಭೆ ಮಾಡಿದಾಗಲೂ ನಾನು ಈ ವಿಚಾರವನ್ನು ಪ್ರಸ್ತಾಪಿಸಿ ಕಠಿಣವಾಗಿ ತಡೆಗಟ್ಟಿ ಎಂದು ಹೇಳುತ್ತಲೇ ಇದ್ದೇನೆ.
ವಿರೋಧ ಪಕ್ಷದ ನಾಯಕರಾದಿಯಾಗಿ ಅನೇಕರು ತಲಾದಾಯದ ಬಗ್ಗೆ ಪ್ರಸ್ತಾಪ ಮಾಡಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಜನರ ತಲಾದಾಯ ರಾಜ್ಯದ ಉಳಿದೆಡೆಗಳಿಗೆ ಹೋಲಿಸಿದರೆ ಕಡಿಮೆ ಇದೆ. ನಮ್ಮಲ್ಲಿ ಪೂರ್ಣ ಪ್ರಮಾಣದ ತಲಾದಾಯ ಕುರಿತ ವರದಿ ಲಭ್ಯ ಇರುವುದು 2023-24 ರ ಸಾಲಿನದು ಅದನ್ನು ಆಧರಿಸಿ ಹೇಳುವುದಾದರೆ,
ಅದರ ಪ್ರಕಾರ ರಾಜ್ಯದ ಜನರ ಸರಾಸರಿ ತಲಾದಾಯ ಪ್ರಸ್ತುತ ದರಗಳಲ್ಲಿ 3,39,813 ರೂ ಇದೆ. ಅದಕ್ಕಿಂತ ಮೇಲೆ 6 ಜಿಲ್ಲೆಗಳಿವೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಜನರ ತಲಾದಾಯ 3.4 ಲಕ್ಷ ರೂಗಳಿಗಿಂತ ಹೆಚ್ಚು.
ಅದಕ್ಕೆ ಸಮೀಪದಲ್ಲಿ 10 ಜಿಲ್ಲೆಗಳಿವೆ. 2.5 ಲಕ್ಷದಿಂದ 3.4 ಲಕ್ಷದವರೆಗೆ ಮಂಡ್ಯ, ತುಮಕೂರು, ಕೊಡಗು, ಹಾಸನ, ಬಳ್ಳಾರಿ, ರಾಮನಗರ, ಉತ್ತರ ಕನ್ನಡ, ಧಾರವಾಡ, ಚಾಮರಾಜನಗರ, ಬಾಗಲಕೋಟೆ ಜಿಲ್ಲೆಗಳು.
2 ರಿಂದ 2.5 ಲಕ್ಷ ತಲಾದಾಯ ಇರುವ ಜಿಲ್ಲೆಗಳು 4. ಅವು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ.
2 ಲಕ್ಷಕ್ಕಿಂತ ಕಡಿಮೆ ಇರುವ ಜಿಲ್ಲೆಗಳು ಚಿತ್ರದುರ್ಗ, ಗದಗ, ಹಾವೇರಿ, ರಾಯಚೂರು, ವಿಜಯನಗರ, ವಿಜಯಪುರ, ಬೀದರ್, ಬೆಳಗಾವಿ, ಕೊಪ್ಪಳ, ಯಾದಗಿರಿ, ಕಲಬುರಗಿ ಸೇರಿ 11 ಇವೆ.
ನಾವು ತಲಾದಾಯವನ್ನು ಅಭಿವೃದ್ಧಿಯ ಮಾನದಂಡವಾಗಿರಿಸಿಕೊಳ್ಳುತ್ತೇವೆ. ತಲಾದಾಯವೆಂದರೆ ಒಟ್ಟಾರೆ ಆ ಜಿಲ್ಲೆಯ ಒಟ್ಟು ಉತ್ಪನ್ನವನ್ನು ಲೆಕ್ಕ ಹಾಕಿ ಅದನ್ನು ಆ ಜಿಲ್ಲೆಯ ಎಲ್ಲಾ ಜನರಿಗೆ ಡಿವೈಡ್ ಮಾಡಿದಾಗ ಸಿಗುವ ಮೌಲ್ಯವಾಗಿರುತ್ತದೆ. ಹೆಚ್ಚು ಇಂಡಸ್ಟಿçಯಲೈಸ್ ಆದ, ಕಮರ್ಷಿಯಲೈಸ್ ಆದ ಜಿಲ್ಲೆಗಳ ತಲಾದಾಯ ಹೆಚ್ಚಿರುತ್ತದೆ. ಹೆಚ್ಚು ಕೃಷಿಯನ್ನು ಅವಲಂಬಿಸಿದ ಜಿಲ್ಲೆಗಳಲ್ಲಿ ಕಡಿಮೆ ಇರುತ್ತದೆ.
ನಾಲ್ಕನೇ ಗುಂಪಿನ ಜಿಲ್ಲೆಗಳ ಸುಧಾರಣೆಗೆ ನಾವು ಹೆಚ್ಚು ಗಮನ ಹರಿಸಬೇಕಾಗಿದೆ. ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 10 ಜಿಲ್ಲೆಗಳು ಹಾಗೂ ಚಿತ್ರದುರ್ಗ ಜಿಲ್ಲೆ ಕಡೆಯ ಕೆಟಗರಿಯಲ್ಲಿ ಬರುತ್ತವೆ. ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಗಳ ತಲಾದಾಯವು 4 ನೇ ಗುಂಪಿನ ಜನರ ತಲಾದಾಯಕ್ಕೆ ಸಮೀಪದಲ್ಲೆ ಇದೆ.
ಆದರೂ ಉತ್ತರ ಕರ್ನಾಟಕದ 10 ಜಿಲ್ಲೆಗಳ ಜನರ ತಲಾದಾಯ ಅದರಲ್ಲೂ ಕಲ್ಯಾಣ ಕರ್ನಾಟಕದ ಜನರ ತಲಾದಾಯ ಕಡಿಮೆ ಇರಲು ಕಾರಣಗಳೇನು? ಎಂದು ಹುಡುಕುತ್ತಾ ಹೋದರೆ ಡೈರಿ ಚಟುವಟಿಕೆಗಳು ಎಲ್ಲಿ ದುರ್ಬಲವಾಗಿವೆಯೋ ಅಲ್ಲಿಯೇ ತಲಾದಾಯವೂ ಕಡಿಮೆ ಇದೆ. ನೀವು ಸಲಹೆ ಕೊಡಬೇಕಾಗಿವುದು ಇಂಥ ವಿಚಾರಗಳನ್ನೆ.
ಹಸು, ಎಮ್ಮೆ ಸಾಕಾಣಿಕೆಯು ತಕ್ಷಣದ ಆದಾಯವನ್ನು ಹೆಚ್ಚು ಮಾಡುತ್ತದೆ. ಜನರು ಗುಳೆ ಹೋಗುವುದನ್ನು ತಪ್ಪಿಸುತ್ತದೆ. ಜನ ನಿಂತರೆ ಅಲ್ಲಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಉತ್ತಮ ಶಿಕ್ಷಣವು ಉತ್ತಮ ಜೀವನದ ಕಡೆಗೆ ಮುನ್ನಡೆಯಲು ಸಾಧ್ಯವಾಗುತ್ತದೆ. ಕೌಶಲ್ಯಯುತ ಶಿಕ್ಷಣದ ಅಗತ್ಯವೂ ಇಂದಿನ ಅಗತ್ಯವಾಗಿದೆ.
ನಾನು ಮಿಲ್ಕ್ ಯೂನಿಯನ್ನುಗಳ ಮಾಹಿತಿ ತರಿಸಿಕೊಂಡು ನೋಡಿದೆ. ಬೆಂಗಳೂರು ಮಿಲ್ಕ್ ಯೂನಿಯನ್ನಿನಲ್ಲಿ ಪ್ರತಿ ದಿನ ಸರಾಸರಿ 17.13 ಲಕ್ಷ ಕೆಜಿ ಹಾಲು ಸಂಗ್ರಹವಾಗುತ್ತದೆ. ಹಾಸನ, ಮಂಡ್ಯ, ತುಮಕೂರು, ಮೈಸೂರು, ಶಿವಮೊಗ್ಗ, ಕೋಲಾರ ಮಿಲ್ಕ್ ಯೂನಿಯನ್ನುಗಳಲ್ಲಿ ಪ್ರತಿ ದಿನ ಸರಾಸರಿ 7.2 ರಿಂದ 14.08 ಲಕ್ಷ ಕೆಜಿಗಳಷ್ಟು ಹಾಲನ್ನು ಸಂಗ್ರಹಿಸಲಾಗುತ್ತಿದೆ. ಆದರೆ ಕಲ್ಬುರ್ಗಿ ಮಿಲ್ಕ್ ಯೂನಿಯನ್ನಿನಲ್ಲಿ [ ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗಳನ್ನು ಒಳಗೊಂಡದ್ದು] ದಿನಕ್ಕೆ ಕೇವಲ 67 ಸಾವಿರ ಕೆಜಿ ಹಾಲು ಮಾತ್ರ ಉತ್ಪಾದನೆಯಾಗುತ್ತಿದೆ. ವಿಜಯಪುರ ಯೂನಿಯನ್ನಿನಲ್ಲಿ 1.47 ಲಕ್ಷ ಕೆಜಿ, ಹಾವೇರಿ ಯೂನಿಯನ್ನಿನಲ್ಲಿ 1.55 ಲಕ್ಷ ಕೆಜಿ ಹಾಲು ಮಾತ್ರ ಉತ್ಪಾದನೆಯಾಗುತ್ತದೆ. ಬೆಳಗಾವಿಯಲ್ಲಿ 2.39 ಲಕ್ಷ ಕೆಜಿ ಸಂಗ್ರಹವಾಗುತ್ತದೆ.
ರಾಜ್ಯದಲ್ಲಿ ಪ್ರಸ್ತುತ ಅಂದಾಜು 6.95 ಕೋಟಿ ಜನಸಂಖ್ಯೆ ಇರಬಹುದು. ಅದರಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 2,96,28,767 ಜನರಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಸುಮಾರು ಶೇ.42 ರಷ್ಟು ಜನರು ಈ ಭಾಗದಲ್ಲಿ ವಾಸಿಸುತ್ತಾರೆ. ಈ ಜಿಲ್ಲೆಗಳ ಜನರ ಸರಾಸರಿ ಹಾಲಿನ ಸಂಗ್ರಹ ದಿನಕ್ಕೆ 3.52 ಕೆಜಿ ಮಾತ್ರ.
ಹಾಗೆಯೇ ರಾಜ್ಯದಲ್ಲಿ 224 ವಿಧಾನ ಸಭಾ ಕ್ಷೇತ್ರಗಳಿವೆ. ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 97 ವಿಧಾನ ಸಭಾ ಕ್ಷೇತ್ರಗಳಿವೆ.
ದಕ್ಷಿಣ ಕರ್ನಾಟಕ ಹಾಗೂ ಕರಾವಳಿಯ ಉಡುಪಿ ದಕ್ಷಿಣ ಕರ್ನಾಟಕ ಜಿಲ್ಲೆಗಳ ಜನರ ಸರಾಸರಿ ಹಾಲಿನ ಸಂಗ್ರಹದ ಪ್ರಮಾಣ ದಿನಕ್ಕೆ 22.4 ಲೀಟರುಗಳು.
ರಾಜ್ಯದಲ್ಲಿ ಸರಾಸರಿ 1 ಕೋಟಿ ಲೀ.ಗಳು. ಇದರಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳ ಸಂಗ್ರಹ 10.45 ಲಕ್ಷ ಲೀಟರ್ ಮಾತ್ರ. ಇನ್ನುಳಿದ ಹಾಲು ಉಳಿದ 17 ಜಿಲ್ಲೆಗಳ ಸುಮಾರು 4 ಕೋಟಿ ಜನರು ಸಂಗ್ರಹಿಸುತ್ತಾರೆ.
ಈ ಕಾರಣದಿಂದಲೆ ನಾವು ಈ ವರ್ಷದ ಬಜೆಟ್ಟಿನಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಹೈನುಗಾರಿಕೆಗೆ ಹೆಚ್ಚು ಆದ್ಯತೆಯನ್ನು ನೀಡಲು ತೀರ್ಮಾನಿಸಿದ್ದೇವೆ.
ಇದರ ಜೊತೆಗೆ ಲೀಪ್ ಎಂಬ [ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮ] ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಅಭಿವೃದ್ಧಿ ಎಂಬುದು ಕ್ಷಣಾರ್ಧದಲ್ಲಿ ಸಾಧ್ಯವಾಗಿಬಿಡಬಹುದಾದ ವಿದ್ಯಮಾನವಲ್ಲ. ನಿರಂತರವಾಗಿ ಹಠತೊಟ್ಟ ಹಾಗೆ ಸಾಧಿಸಬೇಕಾದ ಸಂಗತಿ. ಇದಕ್ಕೆ ಜನರೂ ಸಹ ಒಗ್ಗೂಡಬೇಕು. ಮನೋಭಾವದಲ್ಲಿ ಬದಲಾವಣೆ ತಂದುಕೊಳ್ಳಬೇಕು.
ಆರ್. ಅಶೋಕ್ ಅವರು ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹ ಧನ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಹಾಗೆಯೇ ಪ್ರಣಾಳಿಕೆಯಲ್ಲಿ ಹೇಳಿದ್ದ ಒಂದು ಲೀಟರಿಗೆ 7 ರೂಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಕೊಡಲಿಲ್ಲ ಎಂದು ಆರೋಪಿಸಿದರು. ಇದು ಪೂರ್ತಿ ನಿಜವಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೇವೆ. ಒಮ್ಮೆ ಮೂರು ರೂಪಾಯಿ ಮತ್ತೊಮ್ಮೆ 4 ರೂಪಾಯಿಗಳು. ಇದರ ಜೊತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿಯಿದ್ದ 630 ಕೋಟಿ ರೂಪಾಯಿಗಳನ್ನೂ ರೈತರಿಗೆ ನೀಡಿದ್ದೇವೆ. 2023-24 ರಿಂದ 2025-26 ರವರೆಗೆ 4048 ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದ್ದೇವೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಪ್ರೋತ್ಸಾಹಧನ ಮಾತ್ರ ಬಾಕಿ ಇದೆ. ಬಾಕಿ ಇರುವ ಶೀಘ್ರವಾಗಿ ಬಿಡುಗಡೆ ಮಾಡುತ್ತೇವೆ.
2013-14 ರಲ್ಲಿ ನಮ್ಮ ಸರ್ಕಾರ ಕ್ಷೀರಧಾರೆ ಯೋಜನೆಯನ್ನು ಜಾರಿಗೆ ತಂದು 3 ರೂ ಇದ್ದ ಪ್ರೋತ್ಸಾಹ ಧನವನ್ನು 5 ರೂಗೆ ಹೆಚ್ಚಿಸಿತ್ತು. ಅದನ್ನು 7 ರೂಗಳಿಗೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದೇವೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡುತ್ತೇವೆ. ನಾವು ಇದನ್ನೆಲ್ಲ ಮಾಡಿದ ಕಾರಣಕ್ಕಾಗಿಯೇ ಹಾಲಿನ ಉತ್ಪಾದನೆ ಬಿಜೆಪಿ ಸರ್ಕಾರದ ಅವಧಿಗಿಂತ ಸುಮಾರು 25-30 ಲಕ್ಷ ಲೀಟರುಗಳಷ್ಟು ಹಾಲನ್ನು ಪ್ರತಿ ದಿನ ರೈತರು ನಮ್ಮ ಡೈರಿಗಳಿಗೆ ಕೊಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ 75 ಲಕ್ಷ ಲೀಟರುಗಳಿಗೆ ಇಳಿದಿದ್ದ ಹಾಲಿನ ಸಂಗ್ರಹ ಈಗ 1.05 ಕೋಟಿ ಲೀಟರುಗಳ ವರೆಗೆ ಏರಿಕೆಯಾಗಿದೆ.
ಅನುಗ್ರಹ ಯೋಜನೆ
ನಾವು ಸರ್ಕಾರ 2014 ರಲ್ಲಿ ಅನುಗ್ರಹ ಯೋಜನೆಯನ್ನು ಜಾರಿಗೆ ತಂದಿದ್ದೆವು. ಮೂಲಕ, ಕುರಿ, ಮೇಕೆ, ಎತ್ತು, ಎಮ್ಮೆ, ಹಸು ಮುಂತಾದವುಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ರೈತರಿಗೆ ತೀವ್ರ ಅನಾನುಕೂಲವಾಗುತ್ತದೆಂದು ತೀರ್ಮಾನಿಸಿ ಪರಿಹಾರ ಕೊಡಲು ಪ್ರಾರಂಭಿಸಿದೆವು. ಇದು ದೇಶದಲ್ಲಿಯೆ ಮಾದರಿ ಕಾರ್ಯಕ್ರಮವಾಗಿದೆ. ಹಿಂದಿನ ಸರ್ಕಾರ 2021 ನೇ ಸಾಲಿನಿಂದ 2023 ರವರೆಗೆ ಈ ಯೋಜನೆಯನ್ನು ಸಂಪೂರ್ಣವಾಗಿ ನಿಲ್ಲಿಸಿತ್ತು.
ಕುರಿ/ಮೇಕೆ ಆಕಸ್ಮಿಕ ಸಾವುಗಳು ಉಂಟಾದ ಸಂದರ್ಭದಲ್ಲಿ ಅವುಗಳ ಮಾಲೀಕರಿಗೆ ಪರಿಹಾರವಾಗಿ ರೂ. 5000 ರೂ.ಗಳನ್ನು ನೀಡಲಾಗುತ್ತಿತ್ತು. ಈ ವರ್ಷದಿಂದ 7500 ರೂಗಳಿಗೆ ಹೆಚ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದಾಗಿನಿAದ ಇಲ್ಲಿಯವರೆಗೆ ರೂ.58 ಕೋಟಿಗಳನ್ನು ಮಾಲೀಕರಿಗೆ ಪರಿಹಾರ ನೀಡಿದ್ದೇವೆ.
ಹಾಗೆಯೇ, ಆಕಸ್ಮಿಕವಾಗಿ ಮರಣ ಹೊಂದಿದ ದನ, ಎಮ್ಮೆ, ಎತ್ತು, ಹೋರಿ ಮತ್ತು ಕಡಸುಗಳಿಗೆ ಮಾಲೀಕರಿಗೆ ಪರಿಹಾರವಾಗಿ ರೂ.10,000 ನೀಡಲಾಗುತ್ತಿತ್ತು. ಈ ವರ್ಷದಿಂದ 15000 ರೂಗಳಿಗೆ ಏರಿಕೆ ಮಾಡಿದ್ದೇವೆ. ನಮ್ಮ ಸರ್ಕಾರ ಬಂದಾಗಿನಿAದ ಇಲ್ಲಿಯವರೆಗೆ ರೂ.37.41 ಕೋಟಿಗಳನ್ನು ಮಾಲೀಕರಿಗೆ ಪರಿಹಾರವಾಗಿ ನೀಡಿದ್ದೇವೆ.
ನಾವು ಅಲೆಮಾರಿ ಕುರಿಗಾರರ ಸಂರಕ್ಷಣೆಗಾಗಿ ಕಾಯ್ದೆಯನ್ನೂ ಜಾರಿಗೆ ತಂದಿದ್ದೇವೆ.
ನಾವು ರಾಜ್ಯದ ಹಾಗೂ ಈ ಭಾಗದ ಯುವ ಜನರ ಉದ್ಯೋಗಾವಕಾಶಗಳು ಹೆಚ್ಚಲಿ ಎಂಬ ಕಾರಣದಿಂದ ಹೆಚ್ಚೆಚ್ಚು ಜಿಟಿಟಿಸಿಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಐಟಿಐಗಳನ್ನು ನೀಡುತ್ತಿದ್ದೇವೆ.
ನಮ್ಮ ಸರ್ಕಾರವು ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಆದ್ಯತೆಯ ಸಂಗತಿಗಳಾಗಿ ಪರಿಗಣಿಸುತ್ತದೆ. ಪ್ರಾದೇಶಿಕ ಸಮತೋಲನ ಸಾಧಿಸಬೇಕಾದರೆ ಅಸಮತೋಲನವನ್ನು ಹೋಗಲಾಡಿಸಬೇಕು. ಅಸಮತೋಲನ ಉಂಟಾಗುವುದಕ್ಕೆ ಕಾರಣಗಳನ್ನು ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳಿದ್ದಾಗ ಮಾತ್ರ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ಕುರಿತು ಚಿಂತನೆಗಳನ್ನು ನಡೆಸಿದೆ ಹಾಗೂ ಅನುಷ್ಠಾನಗಳನ್ನು ಮಾಡಿದೆ.
371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ: ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು: ನೀವೇನು ಮಾಡಿದ್ದೀರಿ ದಾಖಲೆ ಕೊಡಿ: ಸಿ.ಎಂ ಖಡಕ್ ಪ್ರಶ್ನೆ
ಅಡ್ವಾನಿ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ 371ಜೆ ಜಾರಿ ಸುತಾರಾಂ ಸಾಧ್ಯವಿಲ್ಲ ಎಂದು ಕಲ್ಯಾಣ ಕರ್ನಾಟಕದ ಜನತೆಗೆ ಕೈ ಎತ್ತಿ ಬಿಟ್ರಲ್ಲಾ ಯಾಕ್ರೀ…ಯಾಕ್ರೀ: ತಮ್ಮನ್ನು ಕೆಣಕಿದ ಬಿಜೆಪಿ ಸದಸ್ಯರನ್ನು ಕುಟುಕಿ ಪ್ರಶ್ನಿಸಿದ ಸಿಎಂ
ಶೈಕ್ಷಣಿಕ ಪ್ರಗತಿಗೆ ಛಾಯಾ ದೇವಣ ಗಾಂವ್ಕರ್ ವರದಿಯ ಶಿಫಾರಸ್ಸುಗಳ ಜಾರಿಗೆ ಸರ್ಕಾರ ಬದ್ದ: ಸಿ.ಎಂ ಸಿದ್ದರಾಮಯ್ಯ ಘೋಷಣೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕುರಿತ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡೆ ಹಿಂದೆ 1980 ರ ಆಸುಪಾಸಿನಲ್ಲಿ ಧರಂಸಿAಗ್ ಅವರ ಅಧ್ಯಕ್ಷತೆಯಲ್ಲಿ ಹೈಪವರ್ ಸಮಿತಿಯನ್ನು ಪ್ರಾರಂಭಿಸಲಾಯಿತು. ಹೈ ಪವರ್ ಕಮಿಟಿ ವರದಿಯನ್ನು ಆಧರಿಸಿ 1991 ಆ ರಲ್ಲಿ ಎಚ್.ಕೆ.ಡಿ.ಬಿ. ಯನ್ನು ಪ್ರಾರಂಭಿಸಲಾಯಿತು. ಆಗ ಯಾವ ಸರ್ಕಾರ ಇತ್ತು?
2002 ರಲ್ಲಿ ಡಾ. ಡಿ. ಎಂ ನಂಜುAಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆದಿದ್ದೆವು. ಸದರಿ ವರದಿಯನ್ನು ಆಧರಿಸಿ ಸುಮಾರು 35000 ಕೋಟಿ ರೂಗಳಿಗಿಂತ ಹೆಚ್ಚಿನ ಅನುದಾನಗಳನ್ನು ಅತ್ಯಂತ ಹಿಂದುಳಿದ, ಅತಿ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗಾಗಿ ಖರ್ಚು ಮಾಡಿದ್ದೇವೆ. 2002 ರಲ್ಲಿ ಯಾವ ಸರ್ಕಾರವಿತ್ತು?
ವಾಜಪೇಯಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಆರ್ಟಿಕಲ್ 371 ಜೆ ಕೊಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದಲ್ಲಿ 6-11-2013 ರಂದು ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಿಶೇಷ ಸ್ಥಾನಮಾನದ 371 ಜೆ ಅನುಷ್ಠಾನ ಮಾಡಲಾಯಿತು. 371 ಜೆ ಅನುಷ್ಠಾನವಾದ ಮೇಲೆ ಆ ಭಾಗದ ಅಭಿವೃದ್ಧಿಗಾಗಿ 24,778 ಕೋಟಿ ರೂಗಳನ್ನು ಒದಗಿಸಿದ್ದೇವೆ. ಇದುವರೆಗೆ ಸುಮಾರು 14,800 ಕೋಟಿ ರೂ ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಿದ್ದು ನಮ್ಮ ಸರ್ಕಾರ
371 ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8 ರಷ್ಟು ಸ್ಥಾನಗಳನ್ನು ಈ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15 ರಿಂದ 2024 ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿAಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇದಲ್ಲದೆ 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬAಧಿತ, ಬಿ-ಫಾರ್ಮಸಿ/ ಡಿ-ಫಾರ್ಮಸಿ ಕೋರ್ಸುಗಳು ಮುಂತಾದವುಗಳಿಗೆ ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆÀಯಲು ಸಾಧ್ಯವಾಗಿದೆ. ಈ ವರ್ಷದ ಅಂಕಿ ಅಂಶಗಳೂ ಸೇರಿದರೆ ಇನ್ನಷ್ಟು ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವುದು ತಿಳಿಯುತ್ತದೆ.
ಈ ಎರಡೂ ವರದಿಗಳನ್ನು ಅನುಷ್ಠಾನ ಮಾಡಿದ ಮೇಲೆ ಪರಿಸ್ಥಿತಿ ಏನಾಗಿದೆಯೆಂದು ಪರಿಶೀಲಿಸುವ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಅರ್ಥಶಾಸ್ತçಜ್ಞರುಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದೇವೆ. ಸದರಿ ಸಮಿತಿಯು ಸದ್ಯದಲ್ಲಿಯೆ ವರದಿ ಸಲ್ಲಿಸಲಿದೆ. ಆ ವರದಿ ಬಂದ ಕೂಡಲೆ ನಾವು ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ.
ನಮ್ಮ ಬಿ.ಆರ್ ಪಾಟೀಲರಾದಿಯಾಗಿ ಅನೇಕ ಸದಸ್ಯರು ಶಿಕ್ಷಣದ ಬಗ್ಗೆ ಮಾತನಾಡಿದ್ದಾರೆ. ನಮಗೂ ಈ ಕುರಿತು ಕಾಳಜಿಯಿದೆ. ಕಲ್ಯಾಣ ಕರ್ನಾಟಕದ ಶಿಕ್ಷಣ ಪರಿಸ್ಥಿತಿಯನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಲು ಶಿಕ್ಷಣ ತಜ್ಞರಾದ ಛಾಯಾ ದೇಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದೇವೆ. ಸದರಿ ಸಮಿತಿಯು ವರದಿ ಸಲ್ಲಿಸಲು ಸಮಯ ಕೇಳಿದ್ದಾರೆ. ಕೂಡಲೇ ವರದಿ ಸ್ವೀಕರಿಸಿ ಸಾಧಕ ಬಾಧಕ ಪರಿಶೀಲಿಸಿ ಅನುಷ್ಠಾನ ಮಾಡಲಾಗುವುದು.
ಇಷ್ಟನ್ನೂ ಮಾಡಿದ್ದು ಯಾರು? ಕಾಂಗ್ರೇಸ್ ನೇತೃತ್ವದ ಸರ್ಕಾರಗಳೆ. ಇದೆಲ್ಲ ಸಾಧ್ಯವಾಗಿರುವುದು ನಮ್ಮ ಸರ್ಕಾರಗಳಿಂದಲೇ. ಕಳೆದ 20 ವರ್ಷಗಳಲ್ಲಿ ನೀವು ಸುಮಾರು 11 ವರ್ಷಗಳ ಕಾಲ ಅಧಿಕಾರದಲ್ಲಿ ಇದ್ರಿ. ಉತ್ತರ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಅಧಿಕಾರಕ್ಕೆ ಬರುವುದಕ್ಕೆ ಮೊದಲು ನಿಮಗೆ ಉತ್ತರ ಕರ್ನಾಟಕ ನೆನಪಾಗುತ್ತದೆ. ಅಧಿಕಾರದಲ್ಲಿದ್ದಾಗ ನಿಮಗೆ ಉತ್ತರ ಕರ್ನಾಟಕ ಇದೆ. ಅದರ ಹಿತಾಸಕ್ತಿ ಕಾಪಾಡಬೇಕು ಎಂದು ಅನ್ನಿಸುವುದೇ ಇಲ್ಲ.
ಉತ್ತರ ಕರ್ನಾಟಕಕ್ಕೆ ಬಿಜೆಪಿಯವರ ಕೊಡುಗೆ ಏನು ಎಂದು ಹೇಳಬೇಕು? ಎಷ್ಟು ಸಂಸ್ಥೆಗಳನ್ನು ಪ್ರಾರಂಭಿಸಲಾಗಿದೆ? ಐಐಎಂಗಳು, ಏಮ್ಸ್ ಆಸ್ಪತ್ರೆಗಳು, ಇಎಸ್ಐ ಆಸ್ಪತ್ರೆಗಳು, ಕೇಂದ್ರದ ಕೈಗಾರಿಕೆಗಳು, ವಿಶ್ವ ವಿದ್ಯಾಲಯಗಳು, ನೀರಾವರಿ ಯೋಜನೆಗಳು ಮುಂತಾದAತೆ ಏನನ್ನು ಸ್ಥಾಪಿಸಲಾಗಿದೆ ಎಂಬುದನ್ನು ಹೇಳಬೇಕು? ಮೋದಿ ಸರ್ಕಾರದಲ್ಲಿ ಪ್ರಹ್ಲಾದ ಜೋಶಿಯವರು ನಿರಂತರವಾಗಿ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಕಂದಾಯ ವಿಭಾಗದ ಲೋಕಸಭಾ ಕ್ಷೇತ್ರಗಳಿಂದ ಆಯ್ಕೆಯಾಗುವ ಎಂಪಿಗಳು ಬಹುತೇಕರು ಬಿಜೆಪಿಯವರು. ಬೆಳಗಾವಿ, ಧಾರವಾಡ, ಹಾವೇರಿ-ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಆಯ್ಕೆಯಾಗಿರುವವರು ಯಾರು? ಇಷ್ಟಿದ್ದರೂ ಕೇಂದ್ರ ಸರ್ಕಾರದ ಕೊಡುಗೆ ಏನು?
ಪ್ರತಿ ಚುನಾವಣೆಯ ಸಂದರ್ಭದಲ್ಲೂ ಜನರಿಗ ಮೋಸ ಮಾಡುತ್ತಲೇ ಇದ್ದಾರೆ. ಡಬಲ್ ಎಂಜಿನ್ ಸರ್ಕಾರ ಇದ್ದರೆ ಅನುಕೂಲ ಎಂದು ಹೇಳುವುದು ಮಾಮೂಲಿ ಮಾತು. ಆದರೆ 2019 ರಿಂದ 2023 ರವರೆಗೆ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೆ ಇದ್ದದ್ದು. ಆ ಸಂದರ್ಭದಲ್ಲಿಯಾದರೂ ಏನಾದರೂ ಯೋಜನೆಗಳನ್ನು ಈ ಭಾಗಕ್ಕೆ ಕೊಟ್ರಾ? ಈ ಭಾಗ ಅಷ್ಟೆ ಅಲ್ಲ ರಾಜ್ಯಕ್ಕೆ ಏನಾದ್ರೂ ಮಾಡಿದ್ರಾ? ಉತ್ತರ ಕರ್ನಾಟಕದ ಬಗ್ಗೆಯಾಗಲಿ, ಕರ್ನಾಟಕದ ಬಗ್ಗೆಯಾಗಲಿ ಮಾತಾಡುವ ನೈತಿಕತೆ ಎಲ್ಲಿದೆ ನಿಮಗೆ?
ಕೇಂದ್ರ ಸರ್ಕಾರಕ್ಕೆ ಈ ವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆ ಹಂತದ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಮಹದಾಯಿ ಯೋಜನೆಯನ್ನು ಇತ್ಯರ್ಥ ಪಡಿಸಲಾಗಿಲ್ಲ.
ನಿಮಗೆ ನೈತಿಕತೆ ಇಲ್ಲವೆಂದು ಹೇಳಿ ನಿಮಗೆ ನಾವು ಸುಮ್ಮನಿರುವುದಿಲ್ಲ. ನಮಗೆ ನೈತಿಕತೆಯಿದೆ. ನಾವು ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಭಾಗದ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.
ಆರ್ ಅಶೋಕ್, ವಿಜಯೇಂದ್ರ ಹಾಗೂ ಇನ್ನಿತರೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರುಗಳು ನಮ್ಮ ಸರ್ಕಾರ ಉತ್ತರ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಆರ್.ಅಶೋಕ್ ಅವರು ಶ್ವೇತಪತ್ರವನ್ನೂ ಡಿಮ್ಯಾಂಡ್ ಮಾಡಿದ್ದಾರೆ. ನಾವು ತಯಾರಿದ್ದೇವೆ. 2006 ರಿಂದಲೂ ನೀವೇನು ಮಾಡಿದ್ದೀರಿ, ನಾವೇನು ಮಾಡಿದ್ದೇವೆ ಎಂಬುದನ್ನೂ ಹೇಳುತ್ತೇವೆ.
ರಾಜ್ಯದಲ್ಲಿ ಪ್ರಸ್ತುತ ಅಂದಾಜು 6.95 ಕೋಟಿ ಜನಸಂಖ್ಯೆ ಇರಬಹುದು. ಅದರಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 2,96,28,767 ಜನರಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಸುಮಾರು ಶೇ.42 ರಷ್ಟು ಜನರು ಈ ಭಾಗದಲ್ಲಿ ವಾಸಿಸುತ್ತಾರೆ. ರಾಜ್ಯದ ಭೌಗೋಳಿಕ ವಿಸ್ತೀರ್ಣ 1,91,791 ಚದರ ಕಿಮೀಗಳು. ಅದರಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳ ವಿಸ್ತೀರ್ಣ1,01,708 ಚದರ ಕಿಮೀಗಳು. ವಿಸ್ತೀರ್ಣದಲ್ಲಿ ಶೇ.53 ರಷ್ಟು ಭೂ ಪ್ರದೇಶ ಈ ಭಾಗದಲ್ಲಿದೆ. ಜನಸಂಖ್ಯೆವಾರು ನೋಡಿದರೆ [ ಜನಸಂಖ್ಯಾ ಸಾಂದ್ರತೆ-ಉತ್ತರ ಕರ್ನಾಟಕದಲ್ಲಿ ಒಂದು ಕಿಮೀಗೆ 292 ಜನ ಜೀವಿಸುತ್ತಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ 443 ಜನ ಬದುಕುತ್ತಿದ್ದಾರೆ]
ಹಾಗೆಯೇ ರಾಜ್ಯದಲ್ಲಿ 224 ವಿಧಾನ ಸಭಾ ಕ್ಷೇತ್ರಗಳಿವೆ. ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ 97 ವಿಧಾನ ಸಭಾ ಕ್ಷೇತ್ರಗಳಿವೆ. ಇದರಲ್ಲೂ ಶೇ. 43 ರಷ್ಟು ಕ್ಷೇತ್ರಗಳು ಈ ಭಾಗದಲ್ಲಿವೆ.
ಹಾಗಾಗಿ ಸರ್ಕಾರಗಳು ಜಾರಿಗೆ ತರುವ ಯೋಜನೆಗಳಲ್ಲೂ ಕನಿಷ್ಟ ಶೇ. 42 ರಿಂದ ಶೇ. 43 ರಷ್ಟಾದರೂ ಈ ಭಾಗಕ್ಕೆ ನೀಡಲೇಬೇಕು ಎಂಬುದು ನಮ್ಮ ಇರಾದೆಯಾಗಿದೆ.
ಗ್ಯಾರಂಟಿ ಯೋಜನೆಗಳು
45.ನಮ್ಮ ಸರ್ಕಾರದ ಪ್ರಮುಖ ಸ್ಕೀಮುಗಳಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿವೆ. ಮೊದಲಿಗೆ ಈ ಭಾಗದ ಜನರಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಎಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರ ಖಾತೆಗಳಿಗೆ ವರ್ಗಾವಣೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸದನದ ಮೂಲಕ ಜನರ ಗಮನಕ್ಕೆ ತರಬೇಕಾಗಿರುವುದು ನಮ್ಮ ಜವಾಬ್ಧಾರಿ.
ನಾವು ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭ ಮಾಡಿದ ದಿನಾಂಕದಿAದ ಅಕ್ಟೋಬರ್- ನವೆಂಬರ್ ವರೆಗೆ ನಮ್ಮ ಸರ್ಕಾರ 106076 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ. ಇದರಲ್ಲಿ 46277 ಕೋಟಿ ರೂಪಾಯಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗಾಗಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಒಟ್ಟು ವೆಚ್ಚದಲ್ಲಿ ಶೇ. 43.63 ರಷ್ಟು ಅನುದಾನಗಳು ಈ ಭಾಗದ ಜನರಿಗಾಗಿ ವೆಚ್ಚ ಮಾಡಲಾಗಿದೆ.
ಈ ಸದನದಲ್ಲಿ ಅನೇಕರಿಗೆ ಗ್ಯಾರಂಟಿ ಯೋಜನೆಗಳ ಕುರಿತು ನಕಾರಾತ್ಮಕ ಭಾವನೆಗಳಿವೆ. ಆದರೆ ಇಡೀ ದೇಶದ ಆರ್ಥಿಕತೆ ಕುಸಿಯುತ್ತಿರುವಾಗ ಕರ್ನಾಟಕ ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆ ಬಹಳ ದೊಡ್ಡದಿದೆ.
ಮಾಜಿ ಸಚಿವರುಗಳಾಗಿದ್ದ ಶಶಿಕಲಾ ಜೊಲ್ಲೆಯವರು ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳ ಶಾಲೆ, ಕಾಲೇಜು, ಆಸ್ಪತ್ರೆ ಮುಂತಾದವುಗಳ ಕುರಿತಂತೆ ಹಲವು ಅಂಕಿ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಅವರು ಹೇಳಿರುವ ಅಂಕಿ ಅಂಶಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ.
ಲೋಕೋಪಯೋಗಿ ಇಲಾಖೆ.
ವಿರೋಧ ಪಕ್ಷದ ಅನೇಕ ಸದಸ್ಯರು ಅಭಿವೃದ್ಧಿ ಕಾಮಗಾರಿಗಳ ಕುರಿತೂ ಪ್ರಸ್ತಾಪಿಸಿದ್ದಾರೆ. ನಾವು ——- ಕೋಟಿ ರೂಗಳನ್ನು ಪಿಡಬ್ಲೂö್ಯಡಿ ಕಾಮಗಾರಿಗಳಿಗಾಗಿ ಒದಗಿಸಿದ್ದೇವೆ. ಆದರೆ ಹಿಂದಿನ ಸರ್ಕಾರ ಅನುದಾನ ಒದಗಿಸದೆ ಕಾಮಗಾರಿಗಳನ್ನು ತೆಗೆದುಕೊಂಡ ಕಾರಣದಿಂದ ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ ಬಿಲ್ಲುಗಳನ್ನು ತೀರಿಸುವ ಭಾರ ನಮ್ಮ ಮೇಲೆ ಬಿದ್ದಿದೆ. ಆದರೂ ಸಹ ಎರಡೂವರೆ ವರ್ಷಗಳಲ್ಲಿ 10467 ಕಿಮೀ ರಸ್ತೆ ನಿರ್ಮಿಸಿದ್ದೇವೆ. ಜೊತೆಗೆ ನಿರ್ವಹಣೆಯನ್ನೂ ಮಾಡುತ್ತಿದ್ದೇವೆ.




