ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಜೂನ್ 30ರಂದು ಮತದಾನ ನಡೆಯಲಿದೆ.
ಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ನಾಳೆ ಕಾಂಗ್ರೆಸ್ ಹಾಗೂ ಬಿಜೆಪಿಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಕಾಂಗ್ರೆಸ್ ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೋಸರಾಜ್, ಬಾಬುರಾವ್ ಚಿಂಚನಸೂರ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ