Latest

2 ಜಿಲ್ಲೆ ಹೊರತುಪಡಿಸಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿ ಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ.

ದಾವಣಗೆರೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Home add -Advt

ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದಾರೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.

ಕೇಂದ್ರದ ಸೂಚನೆ ಮೇರೆಗೆ ಇಂದು ಸಂಜೆ ಅಥವಾ ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡಿಗಡೆಯಾಗಲಿದೆ ಎಂದು ಹೇಳಿದರು.

ಬೆಳಗಾವಿ: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಗೋಲ್ ಮಾಲ್?

Related Articles

Back to top button