
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದಾರೆ.
ಪರಿಷತ್ ಉಪಸಭಾಪತಿಯನ್ನು ಕುರ್ಚಿಯಿಂದ ಕೆಳಗೆಳೆದು ತಂದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿಕೊಂಡಿದ್ದಾರೆ.
ತಳ್ಳಾಟದ ವೇಳೆ ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಕೆಳಗೆ ಬಿದ್ದ ಘಟನೆ ನಡೆದಿದೆ. ಸದನ ಸಮರಾಂಗಣವಾಗಿ ಮಾರ್ಪಡುತ್ತಿದ್ದಂತೆಯೇ ಸಭಾಪತಿ ಪ್ರತಾಪ್ ಚಂದ್ರ ಶಟ್ಟಿ, ವಿಧಾನ ಪರಿಷತ್ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ