ಪ್ರಗತಿವಾಹಿನಿ ಸುದ್ದಿ: ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ರಾಜು ಪೂಜಾರಿ ಬೈಂದೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅಧಿಕೃತವಾಗಿ ಘೋಷಿಸಿದ್ದಾರೆ.
ಈಗಾಗಲೇ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ