
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರವಿ ಪೂಜಾರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಸುಮಾರು 3,654 ಮಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ