ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ.
ಆಗಸ್ಟ್.11ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಆಗಸ್ಟ್ 1 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆಗಸ್ಟ್ 4 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ.
ಆಗಸ್ಟ್ 11ರಂದು ಬೆಳಿಗ್ಗೆ 9 ಗಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದ ಸಿ.ಎಂ.ಇಬ್ರಾಹಿಂ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಯ್ಕೆಯಾಗಲಿರುವ ಪರಿಷತ್ ಸದಸ್ಯರ ಅವಧಿ 2024ರ ಜೂನ್ 17ರವರೆಗೆ ಇರಲಿದೆ.
ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ