Karnataka NewsLatestPolitics

*ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ನ ಐವರು ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲುವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲನುಭವಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್​.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್​ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಯಾಗಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆಯಲ್ಲಿ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ.

ಇನ್ನು ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button