Kannada NewsKarnataka NewsLatestPoliticsUncategorized

ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿ ಫಾರಂ ವಿತರಿಸಿದರು.

ಜೂನ್ 30ರಂದು ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದೇ ಕೊನೇ ದಿನವಾಗಿದೆ. ಈ ಹಿನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ನಾಮಪತ್ರ ಸಲ್ಲಿಸಿದರು.


Home add -Advt

Related Articles

Back to top button