ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ರಾಜ್ಯ ವಿಧಾನಪರಿಷತ್ ನ 25 ಸ್ಥಾನಕ್ಕೆ ಮತದಾನ ಆರಂಭವಾಗಿದೆ. 6,072 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಮೈಸೂರಿನ ತಲಾ 2 ಕ್ಷೇತ್ರ, ಚಿಕ್ಕಮಗಳೂರು, ಕಲಬುರಗಿ, ಉತ್ತರ ಕನ್ನಡ, ಬೀದರ್, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಕೋಲಾರ, ತುಮಕೂರು ಸೇರಿದಂತೆ ಒಟ್ಟು 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದೆ.
ಪುರುಷ ಮತದಾರರು 48,368 ಮಹಿಳಾ ಮತದಾರರು 51,474ರಷ್ಟಿದೆ. ಒಟ್ಟು 6072 ಮತಗಟ್ಟೆಗಳಿದ್ದು, ಬಿಜೆಪಿ, ಕಾಂಗ್ರೆಸ್ 20 ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು. ಜೆಡಿಎಸ್ 6 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಿದೆ. ಜೆಡಿಎಸ್ ಕೇವಲ 6 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸಿದ್ದು ಉಳಿದ ಕ್ಷೇತ್ರಗಳಲ್ಲಿ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಲಿದೆ.
ಡಿಸೆಂಬರ್ 14 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಗ್ರಾಮ ಪಂಚಾಯತ್ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಚಲಾಯಿಸುತ್ತಿದ್ದು ಸ್ಥಳೀಯ ಸಂಸ್ಥೆಗಳಿಂದ ಒಟ್ಟು 25 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿದೆ.
ಹವಾಮಾನ ವೈಪರೀತ್ಯದಿಂದ ಆತಂಕ: ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಇದ್ದ ವಿಮಾನ ಸೇಫ್ ಲ್ಯಾಂಡಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ