Latest

ಪರಿಷತ್ ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬಸವರಾಜ್ ಹೊರಟ್ಟಿ ಸರ್ವೋದಯ ಶಿಕ್ಷಣ ಸಂಸ್ಥೆ ಕೈವಶ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಮೋಹನ್ ಗುಡಿಸಲುಮನಿ ಹೊರಟ್ಟಿ ಸೇರಿ 6 ಜನರ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊರಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಹೊರಟ್ಟಿ ಹಾಗೂ ಇತರರು ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದರೆ ಹಲ್ಲೆ ನಡೆಸಿದ್ದಾರೆ. ಮುಗದ ಗ್ರಾಮದಲ್ಲಿ ಶಾಲೆಗೆ ಭೇಟಿ ಕೊಟ್ಟಾಗ ಕಾರು ಜಖಂಗೊಳಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇಡೀ ಪ್ರಕರಣ ಸಂಬಂಧ ಬಸವರಾಜ್ ಹೊರಟ್ಟಿಯವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣ ಸಂಬಂಧ ಹೊರಟ್ಟಿ ಸೇರಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button