ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ನಲ್ಲಿ ನಡೆದ ಗದ್ದಲ-ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.
ವಿಧಾನಸೌಧದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿದಂತೆ ಸಚಿವರು ಸಮಾಲೋಚನೆ ನಡೆಸಿದ್ದು, ಪರಿಷತ್ ನಲ್ಲಿ ನಡೆದ ಸಂಘರ್ಷದ ಬಗ್ಗೆ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ದೂರು ನೀಡಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಪರಿಷತ್ ಕಲಾಪದ ಗಲಾಟೆ ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ