Latest

*ವಿಧಾನ ಪರಿಷತ್ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಎಂ.ಕೆ.ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿದ್ದರೆ, ಕಾಂಗ್ರೆಸ್ ನ ಅರವಿಂದ್ ಕುಮಾರ ಪರ 26 ಮತಗಳು ಬಂದಿವೆ. ಪರಿಷತ್ ಜೆಡಿಎಸ್ ಸದಸ್ಯರು ತಟಸ್ಥ ನಿಲುವು ಹೊಂದಿದ್ದರು.

ಪರಿಷತ್ ಉಪಸಭಾಪತಿ ಸ್ಥಾನಕ್ಕಾಗಿ ಬಿಜೆಪಿಯ ಪ್ರಾಣೇಶ್ ಹಾಗೂ ಕಾಂಗ್ರೆಸ್ ನ ಅರವಿಂದ ಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಎಂ.ಕೆ.ಪ್ರಾಣೇಶ್ ಪರಿಷತ್ ಉಪಸಭಾಪತಿಯಾಗಿ ಚುನಾಯಿತರಾಗಿದ್ದಾರೆ.

*ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಕಾಂಗ್ರೆಸ್ ಸಾಧನೆಯೇನು? ಜಗದೀಶ್ ಶೆಟ್ಟರ್ ಪ್ರಶ್ನೆ*

https://pragati.taskdun.com/jagadish-shettarmahadai-samaveshacongresssreaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button