Latest

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರ; ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿರೋಧಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ಭಾರತೀಯರಿಗಾಗಿ ಮಾಡಿರುವ ಶಿಕ್ಷಣ ನೀತಿಯಿದು. ಕಾಂಗ್ರೆಸ್ ನವರದ್ದು ಗುಲಾಮಗಿರಿ ಎಜುಕೇಷನ್ ಪಾಲಿಸಿ ಎಂದು ಗುಡುಗಿದರು.

Related Articles

ಇದಕ್ಕೆ ದ್ವನಿಗೂಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನವರದ್ದು ಇಟಲಿ ಪಾಲಿಸಿ ಎಂದರು. ಇದರಿಂದ ಕೆಂಡಕಾರಿದ ಕಾಂಗ್ರೆಸ್ ಸದಸ್ಯರು ಬಿಜೆಪಿಯವರದ್ದು ನಾಗ್ಪುರ ಎಜುಕೇಷನ್ ಪಾಲಿಸಿ ಎಂದು ತಿರುಗೇಟು ನೀಡಿದರು. ಇದಕ್ಕೆ ದನಿಗೂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರದ್ದು ಚಾಣಕ್ಯ ವಿವಿ, ನಾಗ್ಪುರ ಎಜುಕೇಷನ್ ಪಾಲಿಸಿಯಾಗಿದೆ. ಆರ್ ಎಸ್ ಎಸ್ ವಿರುದ್ಧ ಧಿಕಾರ ಎಂದು ಕೂಗಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಹಾಗೂ ಒಂದು ವಾರಕಾಲ ಅಧಿವೇಶನ ವಿಸ್ತರಿಸಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಕಾಗೇರಿ ಹಾಗೂ ಬಿಜೆಪಿ ಸದಸ್ಯರು ಒಪ್ಪದಿದ್ದಾಗ ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲವುಂಟಾದ ಬೆನ್ನಲ್ಲೇ ಸ್ಪೀಕರ್ ಕಾಗೇರಿ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರು.
ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button