ಪ್ರಗತಿವಾಹಿನಿ ಸುದ್ದಿ; ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಕೋಲಾರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಘೋಸಿದರು.
ಎಲ್ಲಾ ನಾಯಕರೂ ಇಲ್ಲಿಂದಲೇ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಎಲ್ಲರೂ ಒಕ್ಕೋರಲಿನಿಂದ ಒತ್ತಾಯಿಸುತ್ತಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನವನ್ನು ತಿರಸ್ಕಾರ ಮಾಡಲು ಸಾಧ್ಯವಿಲ್ಲ. ಹಾಗಾಗಿ ಕೋಲಾರದಿಂದ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ ಎಂದು ಹೇಳಿದರು.
ಅಭಿವೃದ್ಧಿ ವಿಚಾರದಲ್ಲಿ ಯಾವತ್ತೂ ಹಿಂದೆಮುಂದೆ ನೋಡಿಲ್ಲ, ನಾನು ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳನ್ನೂ ಅಭಿವೃದ್ಧಿ ಮಾಡಿದ್ದೇನೆ. ಇಲ್ಲಿನ ಜನರ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ. ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ಈ ಮೂಲಕ 2023ರ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರವನ್ನು ಬಿಟ್ಟು ಕೋಲಾರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಸ್ಪರ್ಧೆಯ ನಿರ್ಧಾರವನ್ನು ಸಿದ್ದರಾಮಯ್ಯ ಘೋಷಿಸಿದರು. ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ. ಇಲ್ಲಿ ಯಾವುದೇ ಕಾರಣಕ್ಕೂ ತಪ್ಪು ಸಂದೇಶ ಹೋಗಬಾರದು. ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ. ಸಿದ್ದರಾಮಯ್ಯ ಇಲ್ಲಿ ಬರುವುದಿಲ್ಲ, ಜನರ ಕಷ್ಟ ಸುಖ ಕೇಳುವುದಿಲ್ಲ. ಸಿದ್ದರಾಮಯ್ಯ ಹೊರಗಿನವರು ಎಂಬ ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಚಡ್ಡಿ ಹಾಕಿದವನು ಕೂಡ, ಅಂದರೇ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬ್ರೇಕ್
https://pragati.taskdun.com/siddu-nija-kanasugalubook-releasebangalore-courtstay-orderdr-yatindra-siddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ