Latest

ಬೀದಿ ನಾಯಿಗಳ ದಾಳಿ; ಮೂರು ಮಕ್ಕಳು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬೀದಿನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ದೋಣಬಘಟ್ಟ ಗ್ರಾಮದಲ್ಲಿ ನಡೆದಿದೆ.

ಸೈಯದ್ ಮದಿನಿ ಮೃತ ಬಾಲಕ. ತಂದೆಯ ಜೊತೆ ಪುಟ್ಟ ಬಾಲಕ ಸೈಯದ್ ಜಮೀನಿಗೆ ಹೋಗಿದ್ದ ಈ ವೇಳೆ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. 7-8 ಬೀದಿನಾಯಿಗಳ ಗುಂಪು ಬಾಲಕನ ಮೇಲೆ ದಾಳಿ ಮಾಡಿವೆ.

Home add -Advt

ಗಂಭೀರವಾಗಿ ಗಾಯಗೊಂಡಿದ್ದ ಸೈಯದ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಇತ್ತೀಚೆಗೆ ರಾಜ್ಯದ ಹಲವೆಡೆಗಳಲ್ಲಿ ಬೀದಿನಾಯಿಗಳ ದಾಳಿಗೆ ಪುಟ್ಟ ಮಕ್ಕಳು ಬಲಿಯಾಗುತ್ತಿದ್ದಾರೆ. ಬಳ್ಳಾರಿಯಲ್ಲಿ ಹುಚ್ಚು ನಾಯಿ ದಾಳಿಗೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಕುರುಗೋಡು ಗ್ರಾಮದಲ್ಲಿ 3 ವರ್ಷದ ಸುರಕ್ಷಾ ಹಾಗೂ 7 ವರ್ಷದ ಶಾಂತಕುಮಾರ್ ಸಾವನ್ನಪ್ಪಿದ್ದಾರೆ.

ಮಕ್ಕಳು ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಸುರಕ್ಷಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿ, ಮುಖವನ್ನೇ ಕಚ್ಚಿದೆ. ಇದೇ ವೇಳೆ ಸುರಕ್ಷಾ ಜತೆ ಆಟವಾಡುತ್ತಿದ್ದ ಶಾಂತ ಕುಮಾರ್ ಮೇಲೂ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಮಕ್ಕಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ನ.21ರಂದು ಸಾವನ್ನಪ್ಪಿದ್ದಳು. ಸುರಕ್ಷಾ ಸಾವನ್ನಪ್ಪಿದ ಒಂದು ದಿನದ ಬಳಿಕ ಬಾಲಕ ನ.22ರಂದು ಶಾಂತಕುಮಾರ್ ಕೂಡ ಮೃತಪಟ್ಟಿದ್ದಾನೆ.
ಮೂವರು ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

Related Articles

Back to top button