Latest

*ಕಾಂಗ್ರೆಸ್ ನೆಲಸಮವಾಗುತ್ತೆ ಎಂದ ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಚುನಾವಣೆಯಲ್ಲಿ ಬಿಜೆಪಿ 135-140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

ನಾಳೆ ಅಥವಾ ನಾಡಿದ್ದು ನಮ್ಮ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

https://pragati.taskdun.com/vinay-kulakarnidharwada-entry-issuehigh-court/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button