Kannada NewsKarnataka NewsLatest

*ಸುಗಮ ಮತದಾನಕ್ಕೆ ಸಹಕರಿಸಿ : ಸಿಇಒ ಹರ್ಷಲ್ ಭೊಯರ್*

ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಕ್ರಮ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆ-2023ರ ಹಿನ್ನೆಯಲ್ಲಿ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಾಂತ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ. ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ಚೇತನರ ಬೈಕ್ ಜಾಥಾ ಮೂಲಕ ಮತಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮೇ-10 ಮತದಾನ ದಿನದಂದು ವಿಶೇಷ ಚೇತನರು ಮತ್ತು ವಯಸ್ಕರ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ ಮೂಲಕ ನೆರೆಳಿನ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ವಿಶೇಷ ಚೇತನರಿಗೆ ವ್ಹಿಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಕೆಲವು ವಿಶೇಷ ಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಮತದಾನರಿಗೆ ಮನೆಯಲ್ಲಿ ಮತದಾನ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು. ಮತದಾನದ ದಿನದಂದು ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತದಾರರ ಮನೆಗಳಿಗೆ ತೆರೆಳಿ ಮತದಾನ ಮಾಡುವ ಸಮಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಮತದಾನ ಮಾಡಿಸುತ್ತಾರೆ.

ಜಿಲ್ಲೆಯಲ್ಲಿ ಅಂದಾಜು 1 ಲಕ್ಷದಷ್ಟು ಜನರು 80 ವರ್ಷ ಮೆಲ್ಪಟ್ಟ ಮತದಾರು ಮತ್ತು 40 ಸಾವಿರ ವಿಶೇಷ ಚೇತನರು ಮತದಾರರು ಇರುವದರಿಂದ ಅಂತಹ ಮತದಾರಿಗೆ ಮತದಾನದ ಮಾಡಲಿಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಕಲ್ಪಿಸುವ ಜೊತೆಗೆ ಮಾಹಿತಿಯನ್ನು ನೀಡಲಾಗುತ್ತಿದೆ.
ಮತದಾರರು ಯಾವದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು. ಸುಗಮ ಮತ್ತು ಸುವ್ಯವಸ್ಥೆಯಿಂದ ಮತದಾನ ಜರಗಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯೊಂದಿಗೆ ಸಾರ್ವಜನಿಕರು ಮತ್ತು ಮತದಾರರು ಸಹಕರಿಸಬೇಕೆಂದು ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://pragati.taskdun.com/kichcha-sudeepreactioncm-basavaraj-bommaividhanasabha-election/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button