
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕಾಂಗ್ರೆಸ್ ಮುಖಂಡನ ಒಡೆತನದ ಸೊಸೈಟಿ, ಬ್ಯಾಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೈಲಹೊಂಗಲ ಕಾಂಗ್ರೆಸ್ ಮುಖಂಡ ವಿ.ಎಸ್.ಸಾಧುನವರ್ ಒಡೆತನದ ಕಿತ್ತೂರು ರಾಣಿ ಚೆನ್ನಮ್ಮ ಸೊಸೈಟಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿರುವ ಹಣ, ಚಿನ್ನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಾಧುನವರ್ 2019 ರ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ