
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಕಲು ಪಟ್ಟಿ (Fake) ಹರಿದಾಡುತ್ತಿದೆ.




