Latest

*ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ.ಸುರೇಶ್ ಹಾಗೂ ಜಗದೀಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಕುಸುಮಾ ಬೆಂಬಲಿಗರು ಮತದಾರರಿಗೆ ತವಾ ಹಂಚುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಚುನಾವಣಾಧಿಕರಿಗಳು ಕಾಣುತ್ತಿದ್ದಂತೆ ತವಾ ಹಂಚುತ್ತಿದ್ದವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ.ಸುರೇಶ್ ಭಾವಚಿತ್ರವಿರುವ ಬಾಕ್ಸ್ ಗಳು ಪತ್ತೆಯಾಗಿವೆ.

ಚುನಾವಣಾಧಿಕಾರಿಗಳ ದೂರು ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ.ಸುರೇಶ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

https://pragati.taskdun.com/karnatakaheavy-rainimd/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button